ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ ಆಸ್ಕರ್ ರೇಸ್ಗೆ ಎಂಟ್ರಿ ಕೊಟ್ಟಿದೆ.
ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ವಿಭಾಗದಲ್ಲಿಅರ್ಹತಾ ಸುತ್ತನ್ನು ಪ್ರವೇಶಿಸಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.
‘ಕಾಂತಾರ ಸಿನಿಮಾ 2 ಆಸ್ಕರ್ ಅರ್ಹತೆ ಪಡೆದಿರುವ ವಿಚಾರ ತಿಳಿಸಲು ಸಂತಸವಾಗುತ್ತಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ’ ಎಂದು ಟ್ವಿಟ್ಟರ್ ನಲ್ಲಿ ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.
ಅಂದಹಾಗೆ ಇತ್ತೀಚೆಗಷ್ಟೇ ‘ಕಾಂತಾರ’ ಸಿನಿಮಾ 100 ದಿನ ಪೂರೈಸಿತ್ತು. ಈ ಸಂತಸವನ್ನು ಚಿತ್ರತಂಡ ಹಂಚಿಕೊಂಡಿತ್ತು. ಅದೇ ರೀತಿ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಕೂಡ ಆಸ್ಕರ್ ಅರ್ಹತೆ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


