nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಣ್ವ ಸಮೂಹದ ಶಾಲೆಯ ಆಸ್ತಿ ಮುಟ್ಟುಗೋಲು | ಅತಂತ್ರ ಸ್ಥಿತಿಯಲ್ಲಿ 417 ಜನ ಮಕ್ಕಳ ಭವಿಷ್ಯ
    ಕೊರಟಗೆರೆ April 21, 2025

    ಕಣ್ವ ಸಮೂಹದ ಶಾಲೆಯ ಆಸ್ತಿ ಮುಟ್ಟುಗೋಲು | ಅತಂತ್ರ ಸ್ಥಿತಿಯಲ್ಲಿ 417 ಜನ ಮಕ್ಕಳ ಭವಿಷ್ಯ

    By adminApril 21, 2025No Comments3 Mins Read
    kanva

    ಕೊರಟಗೆರೆ : ಕಣ್ವಸೌಹಾರ್ದ ಕೋ–ಆಪರೇಟಿವ್ ಕ್ರೆಡಿಟ್ ಲಿಮಿಟೆಡ್ ಹಾಗೂ ಕಣ್ವ ಸಮೂಹ ಸಂಸ್ಥೆಯ ಆರ್ಥಿಕ ಅವ್ಯವಹಾರದಿಂದ ಸರಕಾರ ಜಿ.ನಾಗೇನಹಳ್ಳಿಯ ಕಣ್ವ ಇಂಟರ್ ನ್ಯಾಷನಲ್ ಶಾಲೆಯ ಜಮೀನು, ಕಟ್ಟಡ ಮತ್ತು ನಿವೇಶನ ಮುಟ್ಟುಗೋಲು ಹಾಕಿಕೊಂಡಿದೆ. ಕಣ್ವಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 417 ಜನ ವಿದ್ಯಾರ್ಥಿಗಳ ಶಿಕ್ಷಣ ಅತಂತ್ರ ಸ್ಥಿತಿಯಲ್ಲಿದ್ದು ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಎದುರಾಗಿದೆ.

    ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಪಂ ವ್ಯಾಪ್ತಿಯ ದೊಡ್ಡೇನಹಳ್ಳಿ ಸರ್ವೆ ನಂ.5/4ರಲ್ಲಿ 2 ಎಕರೇ 37 ಕುಂಟೆ ಜಮೀನು ಮತ್ತು 0.26ಕುಂಟೆ ಕಣ್ವ ಇಂಟರ್ ನ್ಯಾಷನಲ್ ಶಾಲೆ ಮತ್ತು ಶಾಲಾ ಕಟ್ಟಡವನ್ನು ಕೆಪಿಐಡಿಎಫ್ ಇ ಕಾಯ್ದೆಯಡಿ ಸರಕಾರ ಮುಟ್ಟುಗೋಲು ಹಾಕಿಕೊಂಡಿದೆ. ಶಾಲೆಯ ಕಾರ್ಯದರ್ಶಿ ಶಿಕ್ಷಣಗೆ ಮನವಿ ಮಾಡಿ ನಿರ್ವಹಣೆಗೆ ಬಿಇಓರನ್ನು ಆಡಳಿತಾಧಿಕಾರಿ ಆಗಿ ನೇಮಿಸಲು ಮಾಡಿದ ಮನವಿಗೂ ಈಗ ಅವಕಾಶ ಇಲ್ಲದಾಗಿದೆ.

    ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೇಗೆ ಶಾಲೆ ಮುಂದುವರೆಸಲು ಸರಕಾರ ಚಿಂತನೆ ನಡೆಸುತ್ತಿದೆ. ಆದರೇ ಶಾಲೆಯ ಐಸಿಎಸ್ ಸಿ ಮಾನ್ಯತೆ 2025 ರ ಮಾರ್ಚ್ 31ಕ್ಕೆ ಮುಕ್ತಾಯವಾಗಿದೆ. ಇದುವರೆಗೆ ಶಾಲೆಯು ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಯ ಮಾನ್ಯತೆ ಸಹ ನವೀಕರಣ ಮಾಡದಿರುವುದು ಇನ್ನೂ ಅನುಮಾನಕ್ಕೆ ಕಾರಣವಾಗಿದೆ.

    ಜಿ.ನಾಗೇನಹಳ್ಳಿಯ ಕಣ್ವಶಾಲೆಯ ಭವಿಷ್ಯದ ಬಗ್ಗೆ ಪೋಷಕರಲ್ಲಿ ಅನಿಶ್ಚಿತತೆ ಮುಂದುವರೆದಿದೆ. ಸರಕಾರವು ಶೀರ್ಘದಲ್ಲೇ ಪೋಷಕರ ಸಭೆ ಕರೆದು ವಾಸ್ತವಾಂಶ ತಿಳಿಸಬೇಕಿದೆ. ಒಟ್ಟಾರೆಯಾಗಿ ಕಣ್ವ ಸಮೂಹದ ಆರ್ಥಿಕ ಅವ್ಯವಹಾರದ ಸಮಸ್ಯೆಯು ಕಣ್ವಶಾಲೆಯ 417ಜನ ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯಕ್ಕೆ ಸಂಕಷ್ಟ ತಂದಿದೆ. ಸರಕಾರವು ತಕ್ಷಣ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಕಾಪಾಡಬೇಕಿದೆ ಎಂದು ಪೋಷಕರು ಒತ್ತಾಯ ಮಾಡಿದ್ದಾರೆ.

    ಶಿಕ್ಷಣ ಇಲಾಖೆ ಆಯುಕ್ತರ ಆದೇಶ:

    ಕಣ್ವ ಇಂಟರ್ ನ್ಯಾಷನಲ್ ಶಾಲೆಯು ಐಸಿಎಸ್ ಸಿ ಪಠಕ್ರಮ ಆಧಾರಿತ ಶಾಲೆ. ಕಣ್ವಶಾಲೆಯ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮತ್ತು ಆಡಳಿತಾಧಿಕಾರಿ ನೇಮಿಸಲು ಸಾಧ್ಯವಿಲ್ಲ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಕಣ್ವಶಾಲೆಯ ಮಕ್ಕಳ ಪೋಷಕರ ಸಭೆ ಕರೆದು ವಾಸ್ತವಾಂಶ ಗಮನಕ್ಕೆ ತರಬೇಕು. ಶಿಕ್ಷಣ ಇಲಾಖೆಯ ನಿಯಮಾನುಸಾರ ಸದರಿ ಶಾಲೆ ಮುಂದುವರೆಸಲು ಅವಕಾಶವಿಲ್ಲ. ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ದಾಖಲಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಧುಗಿರಿ ಡಿಡಿಪಿಐಗೆ 2025ರ ಮಾ.17ರಂದೇ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದಾರೆ.

    ಮಕ್ಕಳಿಗೆ ಉಚಿತ ಶಿಕ್ಷಣದ ಆಮಿಷ:

    ಕಣ್ವ ಇಂಟರ್ ನ್ಯಾಷನಲ್ ಶಾಲೆಯ ಆಡಳಿತ ಮಂಡಳಿಯು ಮಕ್ಕಳ ಪೋಷಕರಿಗೆ ಸಮಸ್ಯೆಯ ವಿಷಯ ತಿಳಿಸದೇ 2025–26ರ ಶೈಕ್ಷಣಿಕ ವರ್ಷಕ್ಕೆ ಶುಲ್ಕವನ್ನು ಕಟ್ಟಿಸಿಕೊಳ್ಳದೇ ಉಚಿತ ಭೋದನೆಯ ವದಂತಿ ಹರಿದಾಡಿವೆ. ಶಾಲೆಯಿಂದ ಮಕ್ಕಳಿಗೆ ಬರುವ ವಾಹನಗಳು ಶುಲ್ಕ ಈವರ್ಷ ಉಚಿತ ಎಂಬ ಮಾತು ಕೇಳಿಬಂದಿವೆ. ಇದು ಪೋಷಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದ್ದು ಶಿಕ್ಷಣ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕಿದೆ.

    417 ಜನ ಮಕ್ಕಳ ಭವಿಷ್ಯವೇ ಅತಂತ್ರ..

    ಕಣ್ವ ಸಮೂಹದ ಜಿ.ನಾಗೇನಹಳ್ಳಿ ಶ್ರೀಕಣ್ವ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 2024–25ನೇ ಸಾಲಿನ ಅನ್ವಯ ನರ್ಸರಿಯಿಂದ 10ನೇ ತರಗತಿ ವರೇಗೆ 417ಜನ ಮಕ್ಕಳು ಐಸಿಎಸ್ ಸಿ ಪಠ್ಯಕ್ರಮ ಅನುಸಾರ ವ್ಯಾಸಂಗ ಮಾಡುತ್ತಿದ್ದಾರೆ. ಮುಖ್ಯಶಿಕ್ಷಕನ ಹುದ್ದೆಯು ಈಗ ಖಾಲಿಯಿದ್ದು 21 ಜನ ಶಿಕ್ಷಕರಿದ್ದಾರೆ. ಶಾಲೆಯ ಜಮೀನು ಮತ್ತು ಕಟ್ಟಡವೇ ಸರಕಾರಕ್ಕೆ ಮುಟ್ಟುಗೋಲು ಆದ ಮೇಲೆ 2025–26ರ ಶೈಕ್ಷಣಿಕ ವರ್ಷದಲ್ಲಿ ಮತ್ತೇ ಜಮೀನು ಸಮಸ್ಯೆ ಎದುರಾದರೇ ಮಕ್ಕಳ ಶಿಕ್ಷಣದ ಪಾಡೇನು ಎಂಬುದೇ ಯಕ್ಷಪ್ರಶ್ನೆ.

    ಜಿ.ನಾಗೇನಹಳ್ಳಿಯ ಕಣ್ವ ಇಂಟರ್ ನ್ಯಾಷನಲ್ ಸ್ಕೂಲ್ ಮುಚ್ಚಿಸಲು ಶಿಕ್ಷಣ ಇಲಾಖೆ ಆಯುಕ್ತರಿಂದ ನಿರ್ದೇಶನವಿದೆ. ಕಣ್ವಶಾಲೆಯಲ್ಲಿ ಏ.೩ರಂದು ಪೋಷಕರ ಸಭೆ ಕರೆಯಲು ಬಿಇಓ ಶಾಲೆಯ ಕಾರ್ಯದರ್ಶಿಗೆ ಮಾ.೨೮ರಂದು ನೊಟೀಸ್ ನೀಡಿದ್ದರು. ಸಭೆ ಕರೆಯಲು ಮಾನ್ಯ ಉಚ್ಚ ನ್ಯಾಯಾಲಯ ತಡೆ ನೀಡಿದೆ ಎಂದು ಮಧುಗಿರಿ ಡಿಡಿಪಿಐ ಗಿರೀಜಾ ಬಿ.ಹೆಚ್. ಹೇಳಿದ್ದಾರೆ.

    ಸರಕಾರದ ಜೊತೆ ಕಣ್ವಶಾಲೆ 30 ವರ್ಷ ಗುತ್ತಿಗೆ ಒಪ್ಪಂದ ಮಾಡಿಕೊಂಡಿದೆ. ಕಣ್ವಶಾಲೆ ಇರುವ ಜಮೀನು ಸರಕಾರದ ಆಸ್ತಿ. ಈಗ ಕಣ್ವಶಾಲೆ ಮಾತ್ರ ನಮ್ಮದು ಅಷ್ಟೆ. ಶಾಲೆಯ ಜಮೀನು ಮತ್ತು ಕಟ್ಟಡದ ಸಮಸ್ಯೆ ಇರೋದು ಸತ್ಯ. ಸರಕಾರದ ಜೊತೆ ಒಪ್ಪಂದ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಕಾಲಾವಕಾಶ ನೀಡಿದೆ ಎಂದು ಬೆಂಗಳೂರು ಕಣ್ವ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ರಜತ್ ಪಿ.ಗೌಡ ಹೇಳಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ಶಿವಮೊಗ್ಗದಲ್ಲಿ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ…

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.