ತಿಪಟೂರು: ತಾಲ್ಲೂಕಿನ ಕರಡಿ ಕೆರೆಯು ಕಳೆದ 15 ವರ್ಷಗಳಲ್ಲಿ 3 ನೇ ಬಾರಿ ಕೋಡಿ ಹರಿಯುತ್ತಿದ್ದು, ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ನಂತರ ಮಾತನಾಡಿದ ಅವರು, ತುಂಬಿದ ಕೆರೆ ಕಟ್ಟೆಗಳಿಗೆ, ನದಿಗಳಿಗೆ ಕೃತಜ್ಞತಾ ಅರ್ಪಣಾ ಮನೋಭಾವದಿಂದ ಪೂಜೆ ಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿದರೆ, ಮುಂದಿನ ದಿನಗಳಲ್ಲಿಯೂ ಕೆರೆಗಳು ನೀರಿನಿಂದ ತುಂಬಿರಲಿ ಎನ್ನುವ ಭಕ್ತಿ ಸಮರ್ಪಿಸಿದಂತಾಗುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ಕರಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕೆ. ಆರ್.ದೇವರಾಜು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ವಸಂತಕುಮಾರಿ, ಉಪಾಧ್ಯಕ್ಷ ಮುನಿರಾಜು, ಸದಸ್ಯರಾದ ರವೀಶ್, ಕುಮಾರಯ್ಯ , ಕವಿತ, ಕಮಲಮ್ಮ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕವಿತ ಹಾಗೂ ಪಂಚಾಯ್ತಿ ಸಿಬ್ಬಂದಿ ಸೇರಿದಂತೆ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz