ಬೆಳಗಾವಿ: ಕರಡಿ ಸಂಗಣ್ಣ ಅವರು ಕಾಂಗ್ರೆಸ್‌ಗೆ ಸೇರಿರುವುದು ಅವರ ವೈಯಕ್ತಿಕ ನಿರ್ಧಾರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ತಿಳಿಸಿದರು.
ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಇಂದು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಡಿ ಸಂಗಣ್ಣ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಕ್ಕೆ ಪ್ರತಿಕ್ರಿಯಿಸಿದರು.
ಅದು ಅವರ ವೈಯಕ್ತಿಕ ನಿರ್ಧಾರ, ತಮ್ಮೊಂದಿಗೆ ಮಾತಾಡುವಂತೆ ಹೇಳಿದ್ದೆ. ಆದರೆ ಅವರು ಬಿಜೆಪಿ ಒದಗಿಸಿದ ವಿಪುಲ ಅವಕಾಶಗಳ ಹೊರತಾಗಿಯೂ ಕಾಂಗ್ರೆಸ್ ಸೇರಿದ್ದಾರೆ. ಇದೆಲ್ಲ ಸ್ವಾಭಾವಿಕ, ಯಾರೇನೂ ಮಾಡಲಾಗದು ಎಂದು ಹೇಳಿದರು.
ಎಲ್ಲೆಡೆ ಬಿಜೆಪಿಗೆ ಅನುಕೂಲಕಾರವಾದ ವಾತಾವರಣವಿದೆ. ಎಲ್ಲ 28 ಸ್ಥಾನಗಳನ್ನು ಗೆಲ್ಲುವ ಪ್ರಯತ್ನದಲ್ಲಿ ಯಶ ಕಾಣಲಿದ್ದೇವೆ. ಕಾಂಗ್ರೆಸ್ ಪಕ್ಷದವರು ಲಿಂಗಾಯತ ಕಾರ್ಡ್ ಪ್ಲೇ ಮಾಡಿ ವೋಟು ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದರೆ ತಮ್ಮದೇನೂ ಅಭ್ಯಂತರವಿಲ್ಲ, ಆದರೆ ಬಿಜೆಪಿಗೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲ ಸಮುದಾಯದವರು ಬೇಕು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


