nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ

    December 27, 2025

    ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ

    December 27, 2025

    ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು

    December 27, 2025
    Facebook Twitter Instagram
    ಟ್ರೆಂಡಿಂಗ್
    • ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ
    • ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ
    • ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು
    • ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ
    • ನಮ್ಮೂರ ಶಾಲೆ ಉಳಿಸಿ:  ಎಐಡಿಎಸ್‌ ಓ, ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ
    • “ಕರಿಕಾಡ” ಚಿತ್ರದ “ಕಬ್ಬಿನ ಜಲ್ಲೆ” ಹಾಡಿಗೆ ವೀಕ್ಷಕ ಫಿದಾ, 2026 ಫೆಬ್ರವರಿ 6ಕ್ಕೆ ವಿಶ್ವಾದ್ಯಂತ ರಿಲೀಸ್
    • ವಿದ್ಯಾರ್ಥಿಗಳ ಕಡೆ ಕುವೆಂಪು ಭಾವಗೀತೆಗಳ ನಡೆ: ಕುವೆಂಪು ಗೀತೆಗಳಲ್ಲಿ ಮಾನವೀಯತೆ ಸ್ಪರ್ಶ
    • ಕುಣಿಗಲ್‌ ನಲ್ಲಿ ಕಸಾಪ ಭವನದ ಗ್ರಂಥಾಲಯ ಲೋಕಾರ್ಪಣೆ:  “ರಾಜಕೀಯ ಸ್ವಾರ್ಥಕ್ಕೆ ಧರ್ಮ, ಜಾತಿಗಳ ಕಂದಕ ಸೃಷ್ಟಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರೋನಾ ಸಂಕಷ್ಟದಲ್ಲಿ ಕರಕುಶಲಕರ್ಮಿಗಳ ಸಹಾಯಕ್ಕೆ ಮೇಳಗಳ ಆಯೋಜನೆ ಅಗತ್ಯ: ನಟಿ ಸಿಂಧು ಲೋಕನಾಥ್‌
    ರಾಜ್ಯ ಸುದ್ದಿ November 12, 2021

    ಕರೋನಾ ಸಂಕಷ್ಟದಲ್ಲಿ ಕರಕುಶಲಕರ್ಮಿಗಳ ಸಹಾಯಕ್ಕೆ ಮೇಳಗಳ ಆಯೋಜನೆ ಅಗತ್ಯ: ನಟಿ ಸಿಂಧು ಲೋಕನಾಥ್‌

    ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಹಿಂದುಸ್ತಾನ್‌ ಆರ್ಟ್‌ ಅಂಡ್‌ ಕ್ರಾಫ್ಟ್‌ ಮೇಳ ಉದ್ಘಾಟನೆ
    By adminNovember 12, 2021No Comments1 Min Read
    sindhu lokanath

    ಬೆಂಗಳೂರು : ಕರೋನಾ ಸಾಂಕ್ರಾಮಿಕ ಹಾಗೂ ಲಾಕ್‌ ಡೌನ್‌ ನಿಂದಾಗಿ ಕರಕುಶಲ ಕರ್ಮಿಗಳು ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೀಡಾಗಿದ್ದಾರೆ. ಕರಕುಶಲ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ದೊರಕದೇ ತೊಂದರೆಗೆ ಸಿಲುಕಿರುವ ಕರಕುಶಲ ಕರ್ಮಿಗಳ ಸಹಾಯಕ್ಕೆ ಇಂತಹ ಮೇಳಗಳ ಬಹಳ ಸಹಕಾರಿ ಎಂದು ಖ್ಯಾತ ನಟಿ ಸಿಂಧು ಲೋಕನಾಥ್‌ ಅಭಿಪ್ರಾಯಪಟ್ಟರು.

    ಇಂದು ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಇಂದಿನಿಂದ 10 ದಿನಗಳ ಆಯೋಜಿಸಿರುವ ಹಿಂದುಸ್ತಾನ್‌ ಆರ್ಟ್‌ ಮತ್ತು ಕ್ರಾಫ್ಟ್‌ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರೋನಾ ಲಾಕ್‌ಡೌನ್‌ ನಿಂದಾಗಿ ತಮ್ಮ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕದೇ ಕರಕುಶಲಕರ್ಮಿಗಳು ತೊಂದರೆಗೀಡಾಗಿದ್ದರು. ಅವರಿಗೆ ಸರಿಯಾದ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ 10 ದಿನಗಳ ಕಾಲ ಕಾಲಾವಕಾಶವನ್ನು ಒದಗಿಸಲಾಗಿದೆ. ಸಾರ್ವಜನಿಕರು ಈ ಮೇಳಕ್ಕೆ ಭೇಟಿ ನೀಡಿ ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಕರಕುಶಲ ಕರ್ಮಿಗಳ ಉತ್ಪನ್ನಗಳನ್ನು ಕೊಂಡು ಅವರಿಗೆ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಹೇಳಿದರು.


    Provided by
    Provided by

    sindhu lokanath

    ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

    ಚಿತ್ತಾರ ಹಾಗೂ ಗ್ರಾಂಡ್‌ ಫ್ಲಿಯಾ ಆಯೋಜಿಸಿರುವ ಈ ಮೇಳದ ಪ್ರಮುಖ ಉದ್ದೇಶ ಕುಶಲಕರ್ಮಿಗಳನ್ನು ಉತ್ತೇಜಿಸಿ ಅವರಿಗೊಂದು ಮಾರುಕಟ್ಟೆ ಕಲ್ಪಿಸುವುದಾಗಿದೆ. 80 ಕ್ಕೂ ಹೆಚ್ಚಿನ ಅಂಗಡಿಗಳ ಮೂಲಕ ಉತ್ಪಾದಕರಿಂದ ನೇರವಾಗಿ ಕರಕುಶಲ ಉತ್ಪನ್ನಗಳನ್ನು ಖರೀದಿಸಬಹುದಾಗಿದೆ ಎಂದು ಮೇಳದ ಆಯೋಜಕರಾದ ಅಫ್ತಾಬ್‌ ತಿಳಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    “ಕರಿಕಾಡ” ಚಿತ್ರದ “ಕಬ್ಬಿನ ಜಲ್ಲೆ” ಹಾಡಿಗೆ ವೀಕ್ಷಕ ಫಿದಾ, 2026 ಫೆಬ್ರವರಿ 6ಕ್ಕೆ ವಿಶ್ವಾದ್ಯಂತ ರಿಲೀಸ್

    December 27, 2025

    “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!

    December 25, 2025

    ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ

    December 25, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಡ ರೈತರಿಗೆ ಸರಕಾರ ಹಕ್ಕು ನೀಡಿ ಬದುಕಲು ಬಿಡಬೇಕು: ಬಸವರಾಜಪ್ಪ

    December 27, 2025

    ಸರಗೂರು:  ಸರಕಾರಿ ಭೂಮಿಗೆ ವಾರಸುದಾರರಾಗಿರುವ ಬಡ ರೈತರಿಗೆ ಸರಕಾರ ಹಕ್ಕು ನೀಡುವ ಮೂಲಕ ಅವರನ್ನು ಬದುಕಲು ಬಿಡಬೇಕು ಎಂದು ಕರ್ನಾಟಕ…

    ಸರಗೂರು:  SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ತರಬೇತಿ

    December 27, 2025

    ರೈತರ ಜಮೀನಿಗೆ ನುಗ್ಗಿದ ಕಾಡಾನೆಗಳು: ಲಕ್ಷಾಂತರ ಬೆಲೆಬಾಳುವ ರಾಗಿ, ಜೋಳ ಆನೆಗೆ ಆಹಾರ: ರೈತರು ಕಂಗಾಲು

    December 27, 2025

    ಅಟಲ್‌ ಜಿ ಆದರ್ಶಗಳು ಸದಾಕಾಲ ಪ್ರೇರಣೆ: ಕೇಂದ್ರ ಸಚಿವ ಸೋಮಣ್ಣ

    December 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.