ನಟ ಶಿವರಾಜ್ ಕುಮಾರ್ ಮತ್ತು ಡ್ಯಾನ್ಸಿಂಗ್ ಸ್ಟಾರ್ ಪ್ರಭುದೇವ ಅಭಿನಯದ ಸಿನಿಮಾ ‘ಕರಟಕ ದಮನಕ’, ಸದ್ದಿಲ್ಲದೆ ಒಟಿಟಿಗೆ ಕಾಲಿಟ್ಟಿದೆ. ಚಿತ್ರತಂಡ, ‘ಕರಟಕ ದಮನಕ’ ಸಿನಿಮಾವನ್ನು ಒಟಿಟಿ ಸ್ಟ್ರೀಮಿಂಗ್ ಮಾಡಲು ಮುಂದಾಗಿದೆ.
ಶಿವಣ್ಣನ ಹುಟ್ಟುಹಬ್ಬದ ಸಂದರ್ಭದಲ್ಲಿ ಅಮೆಜಾನ್ ಪ್ರೈಮ್ ವೀಡಿಯೊದಲ್ಲಿ ಜುಲೈ 12 ರಂದು ಸಿನಿಮಾ ಬಿಡುಗಡೆಯಾಗಿದೆ. ಥಿಯೇಟರ್ ರೀಲಿಸ್ ಆಗಿ ನಾಲ್ಕು ತಿಂಗಳ ಬಳಿಕ ಒಟಿಟಿಗೆ ಸಿನಿಮಾ ಲಗ್ಗೆಯಿಟ್ಟಿದೆ.
ಕರಟಕ ದಮನಕ ಸಿನಿಮಾ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಈ ವಿಷಯವನ್ನ ಸ್ವತಃ ಸಿನಿಮಾ ತಂಡವೇ ಹೇಳಿಕೊಂಡಿದೆ. ಪ್ರೈಮ್ ವಿಡಿಯೋದಲ್ಲೂ ಈ ಸಿನಿಮಾ ನೋಡಿದವ್ರು, ಈ ಬಗ್ಗೆ ಮೆಚ್ಚುಗೆ ಕೂಡ ವ್ಯಕ್ತಪಡಿಸುತ್ತಿದ್ದಾರೆ.
ಕರಟಕ ದಮನಕ ಸಿನಿಮಾದ ವಿಚಾರಕ್ಕೆ ಬಂದ್ರೆ, ಯೋಗರಾಜ್ ಭಟ್ರು ಈ ಚಿತ್ರವನ್ನ ಡೈರೆಕ್ಷನ್ ಮಾಡಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಪ್ರಭುದೇವ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿಶ್ವಿಕಾ ನಾಯ್ಡು ಹಾಗೂ ಪ್ರಭುದೇವ ಜೋಡಿಯ ಹಾಡು ಸಿಕ್ಕಾಪಟ್ಟೆ ಮೋಡಿ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


