ಮಂಗಳೂರು : ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ ಎಂದು ಡಿ.ಸಿ.ಎಂ. ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್,ಕರಾವಳಿ ಭಾಗದ ಸಮಸ್ಯೆಗಳ ಬಗ್ಗೆ ಸಂಘ ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಬಿಜೆಪಿ ಕರಾವಳಿ ಜಿಲ್ಲೆಗಳಲ್ಲಿ ಸಾಮರಸ್ಯ ಹಾಳು ಮಾಡಿದೆ. ಕೋಮು ಸೌಹಾರ್ದತೆ ಕೂಡ ನಮ್ಮ ಪ್ರಣಾಳಿಕೆಯಲ್ಲಿ ಇರಲಿದೆ ಎಂದರು.
ಬಿಜೆಪಿ ಸರ್ಕಾರ ವಿದ್ಯಾರ್ಥಿ ವೇತನವನ್ನೂ ನಿಲ್ಲಿಸಿದೆ. ಪಿಡಬ್ಲ್ಯುಡಿ ಇಲಾಖೆಯ 6.5 ಸಾವಿರ ಕೋಟಿ ಹಣ ಬಿಡುಗಡೆ ಆಗಿಲ್ಲ . ಎಸ್ ಸಿ ಮತ್ತು ಎಸ್ ಟಿ ಮೀಸಲಿಟ್ಟ ಹಣವನ್ನ ಬೇರೆ ಕಡೆ ಖರ್ಚು ಮಾಡಿದ್ದಾರೆ. ಇದೆಲ್ಲವನ್ನೂ ತಿಳಿಸಲು ಪ್ರಜಾಧ್ವನಿ ಆಯೋಜನೆ ಮಾಡಿದ್ದೇವೆ. ನಾಳೆ ಉಡುಪಿ ಮಂಗಳೂರಿನಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ ಎಂದು ಜಿ.ಪರಮೇಶ್ವರ್ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


