nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಕರವೇ ಜಿಲ್ಲಾಧ್ಯಕ್ಷನ ವಿರುದ್ಧ ತಿರುಗಿ ಬಿದ್ದ ಕೊರಟಗೆರೆ ಕರವೇ ಕಾರ್ಯಕರ್ತರು
    ಕೊರಟಗೆರೆ October 15, 2022

    ತುಮಕೂರು ಕರವೇ ಜಿಲ್ಲಾಧ್ಯಕ್ಷನ ವಿರುದ್ಧ ತಿರುಗಿ ಬಿದ್ದ ಕೊರಟಗೆರೆ ಕರವೇ ಕಾರ್ಯಕರ್ತರು

    By adminOctober 15, 2022No Comments2 Mins Read

    ಕೊರಟಗೆರೆ: ತಾಲ್ಲೂಕಿನಲ್ಲಿ ಸುಮಾರು 12 ವರ್ಷಗಳಿಂದ ಕರ್ನಾಟಕದ ರಕ್ಷಣಾ ವೇದಿಕೆ (ಟಿ.ಎ.ನಾರಾಯಣ ಗೌಡರ ಬಣ) ಕನ್ನಡ ಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ಕನ್ನಡ ಪರ ಹೋರಾಟಗಳಲ್ಲಿ ತೊಡಗಿದ್ದ ಕೆ.ಎನ್.ನಟರಾಜು ತಾಲ್ಲೂಕು ಅಧ್ಯಕ್ಷನಾಗಿ ಕನ್ನಡ ನಾಡಿನ ನೆಲ,ಜಲ,ಭಾಷೆ, ವಿಚಾರವಾಗಿ ಸತತ ಹೋರಾಟಗಳನ್ನು ನಡೆಸಿಕೊಂಡು ತಾಲ್ಲೂಕಿನಲ್ಲಿ ನೂರಾರು ಹೋರಾಟಗಳನ್ನು ಮಾಡಿ ನೊಂದವರ ಪರ ಧ್ವನಿಯಾಗಿ ಕನ್ನಡ ಪರ ಸಂಘಟನೆಗಳ ಹೋರಾಟಗಳಲ್ಲಿ ಮುಂಚೂಣಿ ನಾಯಕರಾಗಿ ತಾಲ್ಲೂಕಿನಲ್ಲಿ ಹೊರಹೊಮ್ಮಿದ್ದಾರೆ.

    ಆದರೆ, ಕೆಲವು ದಿನಗಳ ಹಿಂದೆ ರಾಜಕೀಯ ಪ್ರೇರಿತವಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಕೆ ಎನ್ ನಟರಾಜು ರವರನ್ನು ಯಾವುದೋ ದುರುದ್ದೇಶಕ್ಕೆ ಅಧ್ಯಕ್ಷ ಸ್ಥಾನದಿಂದ ವಜಾಗೋಳಿಸಿರುವುದು ತಾಲ್ಲೂಕಿನ ಕರವೇ ಕಾರ್ಯಕರ್ತರಲ್ಲಿ ತೀವ್ರ ಆಕ್ರೋಶಕ್ಕೆ ತುಮಕೂರು ಜಿಲ್ಲಾಧ್ಯಕ್ಷ ಮಂಜುನಾಥ್ ಗೌಡ ಕಾರಣರಾಗಿದ್ದಾರೆ.

    ಈ ಸಂಬಂಧ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕಲಿಂ ವುಲ್ಲ, ಸುಮಾರು 12 ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಮತ್ತು ಕನ್ನಡಪರ ಕಾರ್ಯಕ್ರಮಗಳಲ್ಲಿ ನಿರಂತರವಾದ ಸೇವೆ ಸಲ್ಲಿಸಿಕೊಂಡು ಬಂದಿರುವ ಕರವೇ ಅಧ್ಯಕ್ಷ  ಕೆ.ನಟರಾಜ್ ರವರನ್ನು ಯಾವುದೋ ದುರುದ್ದೇಶಕ್ಕಾಗಿ ತಾಲೂಕು ಅಧ್ಯಕ್ಷನ ಸ್ಥಾನದಿಂದ ವಜಾ ಗೊಳಿಸಿರುವುದು ನಮಗೆಲ್ಲರಿಗೂ ನೋವುಂಟು ಮಾಡಿದೆ. ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯ ಗಮನಕ್ಕೆ ತಾರದೆ ಈ ಆದೇಶವನ್ನು ಹೊರಡಿಸಿರುವ ಜಿಲ್ಲಾಧ್ಯಕ್ಷರ ನಡೆ ಸರಿ ಅನಿಸುವುದಿಲ್ಲ ಎಂಬುದು ನಮ್ಮೆಲ್ಲರ ಅಭಿಪ್ರಾಯವಾಗಿದೆ. ನಾಲ್ಕು ಹೋಬಳಿಗಳಲ್ಲಿ ಸಂಘಟನೆಯನ್ನು ಕಟ್ಟಿ ತಾಲೂಕು ಮಟ್ಟದ ಮತ್ತು ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ಮಾಡಿ ನಿರಂತರವಾದ ಹೋರಾಟಗಳನ್ನು ಮಾಡಿಕೊಂಡು ಬಂದಿರುವ ಮುಂಚೂಣಿ ನಾಯಕರಾದ ಕೆ.ನಟರಾಜುರವರನ್ನು ವಜಾಗೊಳಿಸುವುದರಿಂದ ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಸರಿಪಡಿಸದಿದ್ದರೆ ನಾವು ಎಲ್ಲರೂ ಒಟ್ಟಾರೆ ಸೇರಿ ಸಾಮೂಹಿಕ ರಾಜೀನಾಮೆಯನ್ನು ರಾಜ್ಯಾಧ್ಯಕ್ಷರಿಗೆ ಸಲ್ಲಿಸಲು ಮುಂದಾಗುತ್ತೇವೆಂದು ಈ ಸಂದರ್ಭದಲ್ಲಿ ತಿಳಿಸಿದರು.

    ಇದೇ ಸಂದರ್ಭದಲ್ಲಿ ಕರವೇ ಕಾರ್ಯಕರ್ತರು ಕರವೇ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ ಗೌಡ್ರು ಮಧ್ಯಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಗೌರವಾಧ್ಯಕ್ಷ ಬಿ.ಎಚ್.ಪ್ರಸನ್ನಕುಮಾರ್ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕಲೀಂ ವುಲ್ಲಾ, ಸಾಮಾಜಿಕ ಹೋರಾಟಗಾರ ಜಟ್ಟಿ ಅಗ್ರಹಾರ ನಾಗರಾಜು ಹೊಳವನಹಳ್ಳಿ ಹೋಬಳಿ ಅಧ್ಯಕ್ಷ ಮಹೇಶ್ ಸಿ. ವಿ, ಸಿ.ಏನ್. ದುರ್ಗ ಹೋಬಳಿ ಅಧ್ಯಕ್ಷ ದಿನೇಶ್ ಎಂ ಎಸ್, ತುಂಬಾಡಿ ಶಾಖೆಯ ರಮೇಶ್, ಕೋದಂಡರಾಮು,ಚಿಕ್ಕನಹಳ್ಳಿ ಗೋವಿಂದರಾಜು,ಬುಕ್ಕಾಪಟ್ಟಣ ಶಾಖೆಯ ಅಧ್ಯಕ್ಷರಾದ ಸುನಿಲ್ ಶ್ರೀನಿವಾಸ್,ವಿಜಯ್ ಕುಮಾರ್, ಪ್ರೇಮ್ ಕುಮಾರ್ ,ತೀತಾ ಘಟಕದ ಮಂಜುನಾಥ್,ಗಿರೀಶ್,ಲಕ್ಷ್ಮೀಕಾಂತ, ರಕ್ಷಿತ್ ಗೌಡ್ರು,ರಾಮಮೂರ್ತಿ,ವಿನಯ್ ಕುಮಾರ್,ಮಲ್ಲೇಶ್,ಓಬಳರಾಜು ಹಾಗೂ ಶಿವಕುಮಾರ್ ಹಾಗೂ ಕಾರ್ಯಕರ್ತರು ಹಾಜರಿದ್ದರು..

    ವರದಿ: ಮಂಜುಸ್ವಾಮಿ.ಎಂ.ಎನ್.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!

    September 20, 2026

    ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    September 20, 2026

    ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ

    September 19, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.