nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಬಿಡುಗಡೆಗೆ ಕರ್ನಾಟಕ ರಣಧೀರರ ವೇದಿಕೆಯಿಂದ ಮುಖ್ಯಮಂತ್ರಿಗೆ ಮನವಿ
    ರಾಜ್ಯ ಸುದ್ದಿ December 29, 2023

    ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಬಿಡುಗಡೆಗೆ ಕರ್ನಾಟಕ ರಣಧೀರರ ವೇದಿಕೆಯಿಂದ ಮುಖ್ಯಮಂತ್ರಿಗೆ ಮನವಿ

    By adminDecember 29, 2023No Comments2 Mins Read
    bengaluru

    ಬೆಂಗಳೂರು: ಕನ್ನಡ ಸೇನಾನಿ ಕನ್ನಡ ಪರ ಚಿಂತಕ ನಾಡ ಹೋರಾಟಗಾರ ಕನ್ನಡ ಚಳುವಳಿಯ ಭೀಷ್ಮ ಎಂದು ರಾಜ್ಯದ ಕನ್ನಡ ಪ್ರೇಮಿಗಳು ಕರೆಯುವ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌ ರವರನ್ನು ರಾಜ್ಯ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದು ಖಂಡನೀಯವೆಂದು ಕರ್ನಾಟಕ ರಣಧೀರರ ವೇದಿಕೆಯು ನೆಲಮಂಗಲ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ..

    ಬೆಂಗಳೂರು ನಗರದ ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳು ಕಟ್ಟಡಗಳು ಹಾಗೂ ಇನ್ನಿತರೆ ವ್ಯಾಪಾರ ಸ್ಥಳಗಳಲ್ಲಿ ಶೇಕಡಾ 60% ರಷ್ಟು ಕನ್ನಡ ಭಾಷೆಯನ್ನು ಬಳಸಬೇಕೆಂದು ಶೇಕಡಾ 40% ರಷ್ಟು ಇಂಗ್ಲೀಷ್ ಆಂಗ್ಲ ಭಾಷೆಯನ್ನು ಬಳಸಬೇಕೆಂದು ಸ್ಥಳೀಯ ಪ್ರಾಧಿಕಾರದ ಹಾಗೂ ಬಿ.ಬಿ.ಎಂ.ಪಿ ಮತ್ತು ಸರ್ಕಾರದ ಆದೇಶಗಳಿದ್ದರೂ ಸಹ ಸದರಿ ಆದೇಶಗಳನ್ನು ಉಲ್ಲಂಘನೆ ಮಾಡಿ ಹಿಂದಿ ತೆಲುಗು ತಮಿಳು ಮಲಯಾಳಿ ಸೇರಿದಂತೆ ಆಂಗ್ಲ ಮತ್ತು ಹಿಂದಿ ಭಾಷೆಗಳಲ್ಲಿ ನಾಮಫಲಕಗಳನ್ನು ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಪರ ಸಂಘಟನೆಗಳು 27 ರಂದು ಬೃಹತ್ ಪ್ರತಿಭಟನೆಯನ್ನು ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಪಟ್ಟಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಕನ್ನಡ ಸೇನಾಧಿಗಳನ್ನೂ ಮತ್ತು ಟಿ.ಎ.ನಾರಾಯಣ್ ಗೌಡರನ್ನು ಬಂಧಿಸಿ ಜೈಲಿಗಟ್ಟಿರುವುದು ಕನ್ನಡಿಗರಿಗೆ ತೀವ್ರ ನೋವು ಆಗಿದೆ ಎಂದು ಕರ್ನಾಟಕ ರಣಧೀರರ ವೇದಿಕೆಯು ಕರವೇ ಸೇನಾನಿಗಳನ್ನೂ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರವನ್ನ ಮನವಿ ಪತ್ರ ಸಲ್ಲಿಸುವ ಮೂಲಕ ಬಿಡುಗಡೆಗೆ ಒತ್ತಾಯಿಸಿ ನೆಲಮಂಗಲ ತಹಸೀಲ್ದಾರ್ ಮುಖೇನ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.


    Provided by
    Provided by

    ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಕರ್ನಾಟಕದಲ್ಲಿ ವಾಣಿಜ್ಯ ವೈವಾಟು ವ್ಯಾಪಾರ ಮಾಡುವ ಅಂಗಡಿ ಮುಂಗಟ್ಟುಗಳು ಗೋದಾವುಗಳು ಕಾರ್ಖಾನೆಗಳು ಇನ್ನಿತರ ಕಚೇರಿ ಮಳಿಗೆಗಳು ಮತ್ತು ಮಾಲ್ ಗಳಲ್ಲಿ ಕನ್ನಡದಲ್ಲಿ ಹೆಸರಲಗೆ(ನಾಮಫಲಕ) ಅಳವಡಿಸಬೇಕಾದದ್ದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ ಆದರೆ ಇಲ್ಲಿ ಉತ್ತರ ಭಾರತದ ಗುಲಾಮಗಿರಿ ಮಾಡುತ್ತಿರುವುದು ಖಂಡನೀಯವಾದ ವಿಚಾರ, ಇಂಥ ನೀಚ ಗುಲಾಮಗಿರಿತನವನ್ನು ಪ್ರಶ್ನಿಸಿ ಬೃಹತ್ ಮಟ್ಟದ ಆಂದೋಲನವನ್ನ ಆಯೋಜಿಸಿದ್ದ ಟಿ.ಎ.ನಾರಾಯಣಗೌಡರನ್ನ ಕರ್ನಾಟಕ ರಾಜ್ಯ ಪೊಲೀಸ್ನವರು ಬಂಧಿಸಿರುವುದು ಮತ್ತು ಗೌಡರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸುವುದು ಕನ್ನಡಿಗರಿಗೆ ಇವರು ಮಾಡಿದ ಬಹುದೊಡ್ಡ ಮೋಸ ಹಾಗೂ ಕನ್ನಡಕ್ಕೆ ಮಾಡಿದ ಅನ್ಯಾಯ ಎಂದು ಹೇಳಬಹುದಾಗಿದೆ, ಈ ಕೂಡಲೇ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರು ಮಧ್ಯಪ್ರವೇಶಿಸಿ ಟಿ.ಎ.ನಾರಾಯಣಗೌಡರನ್ನ, ಕನ್ನಡ ಸೇನಾನಿಗಳನ್ನ, ಕರವೇ ಕಾರ್ಯಕರ್ತರನ್ನ ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತೇವೆ, ಕನ್ನಡದ ಸೇನಾನಿಗಳನ್ನು ಬಿಡುಗಡೆ ಮಾಡದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಗೃಹ ಸಚಿವರು, ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವುದರ ಜೊತೆಗೆ ರಾಜ್ಯದಲ್ಲಿ ಮುಖ್ಯಮಂತ್ರಿಗಳನ್ನು ಒಳಗೊಂಡಂತೆ ಸಚಿವರಗಳು ಸಿಕ್ಕಲ್ಲೆಲ್ಲ ಕಪ್ಪು ಬಾವುಟ ಪ್ರದರ್ಶನ ಮಾಡಿ ಗೇರಾವ್ ಹಾಕುತ್ತೇವೆ ಎಂದು ಕರ್ನಾಟಕ ರಣಧೀರರ ವೇದಿಕೆಯ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ಕೆ.ಆರ್ ರವರು ಮಾಧ್ಯಮದೊಂದಿಗೆ ಮಾತನಾಡಿದಾಗ ತಿಳಿಸಿದರು,

    ಇದೇ ಸಂದರ್ಭದಲ್ಲಿ ಬಿ.ಎನ್.ವಿಜಯ್ ಕುಮಾರ್, ನವೀನ್ ಕುಮಾರ್, ಚೇತನ್ ಗೌಡ, ಪೂಜಾಪ್ಪ, ಗಂಗಾಧರ್, ಅರುಣ್ ಕುಮಾರ್, ಗಿರೀಶ್,ಮಹೇಶ್, ಮಾರಪ್ಪ.ಬಿ. ಮತ್ತಿತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

    admin
    • Website

    Related Posts

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3…

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.