ಕಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಮೂವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಬಳಿಯ ಬೆಂಗಳೂರು-ಪೂತಲಪಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಬೆಂಗಳೂರಿನ ಬಸವಣ್ಣನಗರದ ನಿವಾಸಿ ಅಶೋಕ್ ಬಾಬು(31), 28 ವರ್ಷದ ಪತ್ನಿ, 2 ವರ್ಷದ ಮಗು ಮೃತಪಟ್ಟ ದುರ್ದೈವಿಗಳು.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಚಿತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಚಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


