ತಿಪಟೂರು: ತಾಲೂಕು ಕಬ್ನಳ್ಳಿ ಹೋಬಳಿ ಕಟ್ಟಡ ಕಾರ್ಮಿಕ ಸಂಘ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕ ದಿನಾಚರಣೆಯನ್ನು ಅರಳಗುಪ್ಪೆ ಗ್ರಾಮದಲ್ಲಿ ನಡೆಸಲಾಯಿ ತು.
ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಷಡಕ್ಷರಿ, ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅರಳಗುಪ್ಪೆ ಗ್ರಾಮಕ್ಕೆ ನಾನು ಶಾಸಕನಾಗಿದ್ದ ಒಂದು ಕೋಟಿ ರೂ., ನವಗ್ರಾಮ ಯೋಜನೆಯಡಿ ಸಿಮೆಂಟ್ ರಸ್ತೆ ಹಾಗೂ ಅರಳುಕುಪ್ಪೆ ಗ್ರಾಮದ ಕೆರೆಗೆ ನೀರು ತುಂಬಿಸುವ ಯೋಜನೆ ಕೂಲಿ ಕಾರ್ಮಿಕರು ಗಳಿಗೆ ಇಎಸ್ ಐ ಆಸ್ಪತ್ರೆ ತಿಪ್ಟೂರು ನಗರಕ್ಕೆ ತಂದು ಕೊಟ್ಟಿದ್ದೇನೆ ಎಂದರು.
ನಗರದಲ್ಲಿ ತಿಪಟೂರಿನಲ್ಲಿ ಇಂದಿರಾ ಕ್ಯಾಂಟೀನ್ ತಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಡವರಿಗೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದು. ನಮ್ಮ ಅಧಿಕಾರದಲ್ಲಿ ಹಲವಾರು ಯೋಜನೆಗಳನ್ನು ತಿಪಟೂರು ತಾಲೂಕಿಗೆ ತಂದಿರುತ್ತೇನೆ ಅರಳಗುಪ್ಪೆ ಲಿ ಸೇರಿದ ಎಲ್ಲಾ ಕಾರ್ಮಿಕರಿಗೂ ಕಿಟ್ಟು ವಿತರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಿದ್ದಯ್ಯ, ಸಂಘಟನಾ ಸಂಚಾಲಕ ಹರೀಶ್, ತಾಲೂಕು ಪಂಚಾಯಿತಿ ಅಧ್ಯಕ್ಷ ಎ.ಟಿ.ಪ್ರಸಾದ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ಕಿಬ್ಬನಹಳ್ಳಿ ಹೋಬಳಿ ಪಾಳ್ಯದ ಶಿವಲಿಂಗಯ್ಯ ವಹಿಸಿದ್ದರು . ಕಾರ್ಯಕ್ರಮದಲ್ಲಿ ಹಲವಾರು ಮುಖಂಡರುಗಳ ಹೋಗಿ ಕೂಲಿ ಕಾರ್ಮಿಕರು ಭಾಗವಹಿಸಿದ್ದರು.
ವರದಿ: ಆನಂದ ತಿಪಟೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5