ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭ ಆ. 9ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರವಿ ಎಂ. ತಿರ್ಲಾಪೂರ, ‘1919ರಲ್ಲಿ ಪ್ರಾರಂಭವಾದ ಕರ್ನಾಟಕ ಆಡಳಿತ ಸೇವೆ ಅಧಿಕಾರಗಳ ಸಂಘವು 2019ಕ್ಕೆ ನೂರು ವರ್ಷಗಳನ್ನು ಪೂರೈಸಿತ್ತು. ಕೋವಿಡ್ ಕಾರಣದಿಂದ ಶತಮಾನೋತ್ಸವವನ್ನು ಮುಂದೂಡಲಾಗಿತ್ತು’ ಎಂದು ತಿಳಿಸಿದರು.
‘ಈ ಸಮಾರಂಭವನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಉದ್ಘಾಟಿಸಲಿದ್ದಾರೆ. ಸಂಘದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಮತ್ತು ನವೀಕರಣ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಬಿಡುಗಡೆ ಮಾಡಲಿದ್ದಾರೆ’ ಎಂದು ತಿಳಿಸಿದರು. ‘ಟಿ. ಎಂ. ವಿಜಯಭಾಸ್ಕರ, ರಾಜೀವ್ ಚಾವ್ಹಾ, ಗುರುರಾಜ ಕರಜಗಿ ಮತ್ತು ಟಿ. ವಿ. ಮೋಹನ್ ದಾಸ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


