ರಾಜ್ಯ ಸರ್ಕಾರದಿಂದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿ ವೃಂದದ ಕಲ್ಯಾಣ ಸಂಘಟಕರ ಹುದ್ದೆ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 2 ಆಗಸ್ಟ್ ಆಗಿದೆ. ಕರ್ನಾಟಕ ಸೈನಿಕ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14 ಕಲ್ಯಾಣ ಸಂಘಟಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಅದಕ್ಕೆ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಥವಾ 10ನೇ ತರಗತಿ ಉತ್ತೀರ್ಣರಾಗಿ ಸಶಸ್ತ್ರ ಪಡೆಯಲ್ಲಿ ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ, ಸಶಸ್ತ್ರ ಪಡೆಗಳಲ್ಲಿ ಭಾರತೀಯ ಸೇನೆ, ನೌಕಾ ಪಡೆ, ವಾಯು ಸೇನೆಯಿಂದ ಸ್ಪೆಷನ್ ಸರ್ಟಿಫಿಕೆಟ್ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ಪದವಿ ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳು ಮೀರಿರಬಾರದು ನೇಮಕಾತಿ ವಿಧಾನ: ಕನ್ನಡ ಭಾಷೆ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಸ್ಮರ್ಧಾತ್ಮಕ ಪರೀಕ್ಷೆಯಲ್ಲಿ ಎರಡು ಪತ್ರಿಕೆ ಇರಲಿದ್ದು, ಬಹು ನಿಷ್ಟ ಆಯ್ಕೆ ಮಾದರಿಯಲ್ಲಿ ಈ ಪತ್ರಿಕೆ ಇರಲಿದೆ. ಮೊದಲ ಪತ್ರಿಕೆ ಸಾಮಾನ್ಯ ಜ್ಞಾನವಾಗಿದ್ದು, ಎರಡನೇ ಪತ್ರಿಕೆ ಸಾಮಾನ್ಯ ಕನ್ನಡ, ಇಂಗ್ಲಿಷ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಲಿದೆ. ವೇತನ: ಈ ಹುದ್ದೆಗಳಿಗೆ 21400 ರೂ ನಿಂದ 42000ರೂ. ವರೆಗೆ ವೇತನ ನಿಗದಿ ಪಡಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


