ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಗೂ ಮಾರ್ಚ್ 7 ರಂದು ಬೆಳಗಾವಿ ಚಲೋಗೆ ಕರೆ ನೀಡಲಾಗಿದ್ದು, ಇದಕ್ಕೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ.
ಅಲ್ಲದೆ ಮಾರ್ಚ್ 11 ರಂದು ಮೇಕೆದಾಟಿಗಾಗಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್, ಮಾ.14 ರಾಮನಗರ ಮಂಡ್ಯ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ಮತ್ತು ಮಾ.17 ರಂದು ಹೊಸಕೋಟೆ – ಚೆನ್ನೈ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಲಾಗಿದೆ.
ಕರ್ನಾಟಕ ಬಂದ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಬೆಂಬಲ ಕೊಡಬೇಕು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಇಲಾಖೆಯ ಎಲ್ಲ ಬಸ್ ಗಳನ್ನು ಅಂದು ನಿಲ್ಲಿಸಬೇಕು. ನಮಗೆ ಹೋಟೆಲ್ ಮಾಲೀಕರು, ಸಿನಿಮಾ ರಂಗದವರು, ಸರ್ಕಾರಿ ನೌಕರರು, ದೊಡ್ಡ ಹಾಗೂ ಸಣ್ಣ ವಾಹನಗಳ ಮಾಲೀಕರು ನಮಗೆ ಬೆಂಬಲ ಸೂಚಿಸಬೇಕು ಎಂದು ವಾಟಾಳ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4