ಬೆಂಗಳೂರು: ರಾಜ್ಯದಲ್ಲಿ ಎಂಇಎಸ್ ಪುಂಡಾಟಿಕೆ ಖಂಡಿಸಿ ನಾಳೆ ಕರೆ ಕೊಟ್ಟಿದ್ದ ‘ಕರ್ನಾಟಕ ಬಂದ್’ ನ್ನ ವಾಟಾಳ್ ನಾಗರಾಜ್ ಅವರು ಹಿಂಪಡೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಮತ್ತು ಕನ್ನಡ ಧ್ವಜ ಸುಟ್ಟು ಹಾಕಿರುವುದನ್ನ ಖಂಡಿಸಿ ಡಿಸೆಂಬರ್ 31(ನಾಳೆ) ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡಪರ ಸಂಘಟನೆಗಳು ಘೋಷಣೆ ಮಾಡಿದ್ದವು.
ಆದರೆ, ಕರ್ನಾಟಕ ಬಂದ್ ಗೆ ಹಲವು ಕನ್ನಡ ಪರ ಸಂಘಟನೆಗಳು ಬಂದ್ ಹಿಂಪಡೆದ ಹಿನ್ನೆಲೆಯಲ್ಲಿ ಇಂದು ಸಂಜೆ ಕನ್ನಡ ಪರ ಹೋರಾಟಗಾರರಾದ ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ ಹಾಗೂ ಉಮೇಶ್ ಬಣಕಾರ್ ಸೇರಿ ಹಲವು ಮುಖಂಡರು ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದರು.
ಭೇಟಿ ಬಳಿಕ ನಾಳೆ ಕರ್ನಾಟಕ ಬಂದ್ ಮಾಡುವ ನಿರ್ಧಾರವನ್ನ ಹಿಂಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy