ಬೆಂಗಳೂರು: ಎಂಇಎಸ್ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಆಗಲಿದ್ದು, ತುರ್ತು ಸೇವೆಗಳು ಮಾತ್ರವೇ ಲಭ್ಯವಿರುತ್ತವೆ.
ಕರ್ನಾಟಕ ಬಂದ್ ಗೆ ಸುಮಾರು 35 ಸಂಘಟನೆಗಳು ಸದ್ಯ ಬೆಂಬಲ ನೀಡಿವೆ ಇದರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಕನ್ನಡ ಚಿತ್ರರಂಗ ಮೌನವಾಗಿದ್ದು, ಈ ಹೋರಾಟಕ್ಕೆ ಬೆಂಬಲ ನೀಡಲು ಮೀನಾಮೇಷ ಎಣಿಸುತ್ತಿದೆ.
ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾರ್ಮೆಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ ಬೆಂಬಲಕ್ಕೆ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಕರ್ನಾಟಕ ಬಂದ್ ಗೆ ಬೀದಿ ಬದಿ ವ್ಯಾಪಾರಿಗಳ ಸಂಘ, ಓಲಾ, ಉಬರ್ ಬೆಂಬಲ ನೀಡಿದೆ. ಓಲಾ, ಉಬರ್ ಅಸೋಸಿಯೇಷನ್ ತನ್ವೀರ್, ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಅವತ್ತು ಯಾವುದೇ ವಾಹನ ರೋಡಿಗಿಳಿಯಲ್ಲ ಎಂದು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy