ಬೆಂಗಳೂರು: ಮಹಾರಾಷ್ಟ್ರ ಮತ್ತು ಕರ್ನಾಟಕದ ಬಸ್ ಸಂಚಾರ ಸುಗಮವಾಗಿದ್ದು ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಈ ಹಂತದಲ್ಲಿ ಕರ್ನಾಟಕ ಬಂದ್ ಅಗತ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಪರ ಸಂಘಟನೆಗಳ ಕರೆ ನೀಡಿರುವ ಕರ್ನಾಟಕ ಬಂದ್ ಕುರಿತು ಪ್ರತಿಕ್ರಿಯೆ ನೀಡಿದರು.
ಕರ್ನಾಟಕದ ಸಾರಿಗೆ ಸಂಸ್ಥೆ ನಿರ್ವಾಹಕನ ಮೇಲೆ ಹಲ್ಲೆಯಾದ ಘಟನೆ ನಡೆದ 8 ದಿನ ಆಗಿದೆ. ಆರಂಭದಲ್ಲಿ ಒಂದೆರೆಡು ದಿನ ಪ್ರತಿಭಟನೆಗಳಾಗಿದ್ದವು. ಯಾವುದೇ ಹಾನಿಯಾಗಿಲ್ಲ ಎಂದು ಅವರು ಹೇಳಿದರು.
ಮಹಾರಾಷ್ಟ್ರದಲ್ಲೂ ನಮ್ಮ ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಮಸಿ ಬಳಿದಿದ್ದರು. ಅದಕ್ಕೂ ಪ್ರತಿಭಟನೆಗಳು ನಡೆದಿವೆ ಎಂದು ಹೇಳಿದರು. ನೆಲ, ಜಲ, ಭಾಷೆ ವಿಚಾರದಲ್ಲಿ ಹೋರಾಟಗಳಿಗೆ ನಮ್ಮ ಬೆಂಬಲವಿದೆ. ಆದರೆ ಈ ಸಂದರ್ಭದಲ್ಲಿ ಬಂದ್ ಅಗತ್ಯವಿಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4