ಕೋಲಾರ: ಕರ್ನಾಟಕದ ಬಾಡಿ ಬಿಲ್ಡರ್ ಅಮೆರಿಕದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಸುರೇಶ್ ಕುಮಾರ್ (42) ಎಂಬ ಖ್ಯಾತ ಬಾಡಿ ಬಿಲ್ಡರ್ ಮೃತ ದುರ್ದೈವಿ. ತಮ್ಮ ಕುಟುಂಬವನ್ನು ಅಮೆರಿಕಕ್ಕೆ ಕರೆದೊಯ್ದಿದ್ದ ಸುರೇಶ್, ಕೆಲಸದ ನಿಮಿತ್ತ ಫ್ಲೋರಿಡಾದಿಂದ ಟೆಕ್ಸಾಸ್ ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಕೋಲಾರದ ಗಾಂಧಿನಗರದ ಚಲಪತಿ ಮತ್ತು ಮುನಿಯಮ್ಮ ದಂಪತಿಯ ಪುತ್ರನಾಗಿದ್ದ ಸುರೇಶ್, ತಮ್ಮ ವೃತ್ತಿಜೀವನದಲ್ಲಿ ದೇಹದಾರ್ಢ್ಯ, ರೂಪದರ್ಶನ ಮತ್ತು ಫಿಸಿಯೋಥೆರಪಿಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದರು.
ಸುರೇಶ್ ಕುಮಾರ್ ಅವರು ಫ್ಲೋರಿಡಾದಿಂದ ಟೆಕ್ಸಾಸ್‌ಗೆ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಮೂರು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದರೂ, ತೀವ್ರವಾದ ಗಾಯಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಕೊನೆಗೆ ಸುರೇಶ್ ಕುಮಾರ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC