ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ವಿಧಾನಸಭೆಯಲ್ಲಿ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್‌ನ ಒಟ್ಟು ಗಾತ್ರ 4,48,004 ಕೋಟಿ ರೂ. ಗಳಾಗಿದ್ದು, ವಿವಿಧ ಇಲಾಖೆಗಳಿಗೆ ಹಂಚಿಕೆಯಾದ ಅನುದಾನದ ವಿವರಗಳು ಈ ಕೆಳಗಿನಂತಿವೆ.
ಶಿಕ್ಷಣ ಇಲಾಖೆ: ₹47,224 ಕೋಟಿ (ಅತಿ ಹೆಚ್ಚು ಅನುದಾನ)
ಮಹಿಳಾ ಮತ್ತು ಮಕ್ಕಳ ಕಲ್ಯಾಣ: ₹34,929 ಕೋಟಿ
ಇಂಧನ ಇಲಾಖೆ: ₹29,947 ಕೋಟಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: ₹26,559 ಕೋಟಿ
ಲೋಕೋಪಯೋಗಿ ಮತ್ತು ಸಾರಿಗೆ ಇಲಾಖೆ: ₹23,100 ಕೋಟಿ
ನೀರಾವರಿ ಇಲಾಖೆ: ₹22,436 ಕೋಟಿ
ನಗರಾಭಿವೃದ್ಧಿ ಮತ್ತು ವಸತಿ ಇಲಾಖೆ: ₹22,203 ಕೋಟಿ
ಕಂದಾಯ ಇಲಾಖೆ: ₹19,843 ಕೋಟಿ
ಸಮಾಜ ಕಲ್ಯಾಣ ಇಲಾಖೆ: ₹18,612 ಕೋಟಿ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ₹17,817 ಕೋಟಿ
ಗೃಹ ಇಲಾಖೆ: ₹11,424 ಕೋಟಿ
ಕೃಷಿ ಮತ್ತು ತೋಟಗಾರಿಕೆ ಇಲಾಖೆ: ₹8,373 ಕೋಟಿ
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ: ₹7,942 ಕೋಟಿ
ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ: ₹4,084 ಕೋಟಿ
ಇತರೆ ವಲಯಗಳಿಗೆ: ₹1,72,757 ಕೋಟಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


