ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಇದೇ ಏ.26 ರಂದು ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ.
ರಾಜ್ಯಕ್ಕೆ ಭೇಟಿ ನೀಡಲಿರುವ ಯೋಗಿ ಆದಿತ್ಯನಾಥ್, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪ್ರಚಾರ ನಡೆಸಲಿದ್ದಾರೆ. ಯೋಗಿ ಆದಿತ್ಯನಾಥ್ ಜೊತೆ ಡಿಸಿಎಂಗಳಾದ ಕೇಶವ ಪ್ರಸಾದ್ ಮೌರ್ಯ, ಬ್ರಿಜೇಶ್ ಪಾಠಕ್ ಮತ್ತು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಚೌಧರಿ ಭೂಪೇಂದ್ರ ಸಿಂಗ್ ಕೂಡ ಆಗಮಿಸಲಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಯೋಗಿ ಟೀಂ ಮತಬೇಟೆ ನಡೆಸಲಿದೆ. ಸಾರ್ವಜನಿಕ ಸಭೆ ಮತ್ತು ಕಾರ್ನರ್ ಮೀಟಿಂಗ್‌ಗಳನ್ನು ನಡೆಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


