ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ಸಭೆ ನಡೆಯಲಿದೆ.
ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಪಾಲ್ಗೊಳ್ಳಲು ಬಿಎಸ್ ಯಡಿಯೂರಪ್ಪ ಅವರು ನಿನ್ನೆ ರಾತ್ರಿ ದೆಹಲಿಗೆ ಆಗಮಿಸಿದ್ದಾರೆ. ಒಂದೇ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲು ಬಿಜೆಪಿ ನಿರ್ಧರಿಸಿದೆ. ಕೋರ್ ಗ್ರೂಪ್ ಸಭೆಯಲ್ಲಿ ಪ್ರತಿ ಕ್ಷೇತ್ರಕ್ಕೆ ಮೂರು ಅಭ್ಯರ್ಥಿಗಳ ಹೆಸರನ್ನು ಒಳಗೊಂಡ ಕಿರುಪಟ್ಟಿಯನ್ನು ಸಿದ್ಧಪಡಿಸಲಾಗಿದೆ.
ಈ ಪಟ್ಟಿಯಿಂದ ಕೇಂದ್ರ ಚುನಾವಣಾ ಆಯೋಗ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಿದೆ. ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


