ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ಹಾಗೂ ಖಜಾಂಚಿ ಆಯ್ಕೆಗೆ ಶನಿವಾರದಂದು ಚುನಾವಣೆ ನಡೆದಿದೆ.
ಕುತೂಹಲ ಭರಿತವಾದಂತಹ ಈ ಚುನಾವಣೆಯಲ್ಲಿ ಅಧ್ಯಕ್ಷರ ಸ್ಥಾನವನ್ನು ಗಿಟ್ಟಿಸಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಯತಿ ಕುಮಾರ್ ಹಾಗೂ ಕಂದಾಯ ಇಲಾಖೆಯ ರವಿಕುಮಾರ್ ಕಣದಲ್ಲಿದ್ದು, ಖಜಾಂಚಿ ಸ್ಥಾನವನ್ನು ಗಿಟ್ಟಿಸಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ರಾಮಾಂಜನೇಯಲು ಹಾಗೂ ಕೈಗಾರಿಕಾ ತರಬೇತಿ ಸಂಸ್ಥೆಯ ಶೇಖರ್ ಬಾಬು ಕಣದಲ್ಲಿದ್ದಾರೆ.
ಒಟ್ಟು 33 ಮತಗಳ ಪೈಕಿ 31 ಮತ ಚಲಾವಣೆಯಾಗಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಂಗಧಾಮಪ್ಪ ಹಾಗೂ ಶಾಲಾ ಶಿಕ್ಷಣ ಇಲಾಖೆಯಿಂದ ಅಭ್ಯರ್ಥಿಯಾಗಿರುವ ಯತಿ ಕುಮಾರ್ ಮತಗಟ್ಟೆಯ ಕಡೆ ತಲೆ ಹಾಕದಿರುವುದು ಕುತೂಹಲಕ್ಕೆ ಕಾರಣವಾಗಿತ್ತು,
ಅಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವಂತಹ ಸಂದರ್ಭದಲ್ಲಿ ಮೊದಲಿಗೆ ಯತಿ ಕುಮಾರ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು ನಂತರ ಸ್ವೀಕರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು ಈ ಬಗ್ಗೆ ಚುನಾವಣಾ ಅಧಿಕಾರಿ ರಾಮಚಂದ್ರಪ್ಪ ಸ್ಪಷ್ಟನೆ ನೀಡಿದ್ದಾರೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಂಗಧಾಮಪ್ಪ ಅವರು ಸಹ ಈ ಒಂದು ಅಧ್ಯಕ್ಷರ ಸ್ಥಾನವನ್ನು ತಮ್ಮದಾಗಿಸಿಕೊಳ್ಳಲು ಕಸರತ್ತು ನಡೆಸಿದ್ದು ಕೊನೆ ಕ್ಷಣದಲ್ಲಿ ಕೈ ತಪ್ಪಿದಂತಾಗಿದೆ.
ಫಲಿತಾಂಶ:
ಅಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆಯಾಗಿದ್ದು, ಖಜಾಂಚಿಯಾಗಿ ಶೇಖರ್ ಬಾಬು ಆಯ್ಕೆಯಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q