ಪೊಲೀಸ್ ಠಾಣೆಗಳಿಗೆ ಬರುವ ಸಿವಿಲ್ ಪ್ರಕರಣಗಳಿಗೆ ಕ್ರಿಮಿನಲ್ ಬಣ್ಣ ಬಳಿದು ದುಡ್ಡು ವಸೂಲಿ, ಹಣಕಾಸಿನ ವ್ಯಾಪಾರಕ್ಕೆ ನಿಂತರೆ ಪೊಲೀಸರಿಗೆ ಕಠಿಣವಾದ ಪಾಠ ಕಲಿಸಬೇಕಾದೀತು. ಪೊಲೀಸ್ ಠಾಣೆಗಳು ವ್ಯಾಪಾರಿ ಕೇಂದ್ರವಲ್ಲ ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಕರ್ನಾಟಕ ಹೈಕೋರ್ಟ್‌ನ ನ್ಯಾ. ಎಚ್.ಪಿ. ಸಂದೇಶ್ ಅವರಿದ್ದ ನ್ಯಾಯಪೀಠ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸರ ಮೂಲಕ ರಾಜ್ಯದ ಪೊಲೀಸರಿಗೆ ಈ ಎಚ್ಚರಿಕೆ ನೀಡಿದೆ.
ಸಿವಿಲ್ ವ್ಯಾಜ್ಯವನ್ನು ಕ್ರಿಮಿನಲ್ ಪ್ರಕರಣವನ್ನಾಗಿ ಮಾರ್ಪಡಿಸಲು ಹೇಗೆ ಸಾಧ್ಯ? ಪೊಲೀಸ್ ಠಾಣೆಯಲ್ಲಿ ಸಿವಿಲ್ ವ್ಯಾಜ್ಯವನ್ನು ತೀರ್ಮಾನಿಸಲು ಪೊಲೀಸರಿಗೆ ಅಧಿಕಾರವನ್ನು ನೀಡಿದವರು ಯಾರು ಎಂದು ನ್ಯಾಯಪೀಠ ಪ್ರಶ್ನಿಸಿದೆ.
ನಿವೇಶನವೊಂದರ ಖರೀದಿಗೆ ಸಂಬಂಧಿಸಿದ ವಿಚಾರದಲ್ಲಿ ಮಾರಾಟದಾರರಿಗೆ ಹಣ ಪಾವತಿಸಲು ಖರೀದಿದಾರರಿಗೆ ಒತ್ತಾಯಿಸಿದ ಹಾಗೂ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠ ಪೊಲೀಸರ ನಡವಳಿಕೆ ಬಗ್ಗೆ ಕಟುವಾಗಿ ಈ ಹೇಳಿಕೆ ನೀಡಿದೆ.
ಪೊಲೀಸ್ ಠಾಣೆಗಳಲ್ಲಿ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸುವ ಪೊಲೀಸರ ಕಾರ್ಯವೈಖರಿ ಮತ್ತೆ ಮತ್ತೆ ನಡೆಯುತ್ತಿದೆ. ಠಾಣೆಗಳನ್ನು ವ್ಯಾಪಾರಿ ಕೇಂದ್ರಗಳನ್ನಾಗಿ ಮಾರ್ಪಡಿಸಲಾಗಿದೆ ಎಂದು ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296