nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ January 9, 2025

    ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ: ಸಿಎಂ ಸಿದ್ದರಾಮಯ್ಯ

    By adminJanuary 9, 2025No Comments2 Mins Read
    siddaramaiah

    ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ.  ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ.

    ಅನ್ಯಾಯ–ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು. ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ  ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಬಂದಿದ್ದಾರೆ.


    Provided by
    Provided by

    ಶರಣಾಗಿರುವ ನಕ್ಸಲರು . ಮುಂದಿನ ದಿನಗಳಲ್ಲಿ ಇವರೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲೀಯರ ಶರಣಾಗತಿಯ ನಂತರ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂಬ ವಿಶ್ವಾಸ ನನಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಿದ ಪುನರ್ವಸತಿ ಸಮಿತಿ ಸದಸ್ಯರು ಮತ್ತಿತರ ಸಾಮಾಜಿಕ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

    ಯಾಕೆ ಬೆಚ್ಚಿ ಬಿದ್ದಿಲ್ಲ?: ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಚತ್ತೀಸ್ ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ ಎಂದು ಕೇಳಬೇಕಾಗಿದೆ. ಶಹಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ?

    ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಸರ್ಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು  41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ?

    ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾ ಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ.

    ಲಾಠಿ-ದೊಣ್ಣೆ, ಕತ್ತಿ-ತ್ರಿಶೂಲಗಳನ್ನು  ನೀಡಿ ಅಮಾಯಕರನ್ನು ಹಿಂಸಾಮಾರ್ಗಕ್ಕೆ ಇಳಿಸಿ ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ. ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ ಸಮಾಜದ ಮುಖ್ಯವಾಹಿನಿಗೆ ಸೇರಿಸಿ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.