ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಕ್ಕೆ ಕರ್ನಾಟಕವೇ ಸ್ಫೂರ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ವಾವಲಂಬಿ ಬಲಿಷ್ಠ ಭಾರತ ನಿರ್ಮಾಣದ ಮಹಾ ಸಂಕಲ್ಪ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಕರ್ನಾಟಕವೇ ಸ್ಫೂರ್ತಿ, ಅಣ್ಣ ಬಸವಣ್ಣ ನವರ ಕಾಯಕ ತತ್ವವೇ ಪ್ರೇರಣೆ ಇದಕ್ಕೆ ‘ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ’ ಸಾಕ್ಷಿ ಸಂಕೇತವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ಚಲೋ ಹಳ್ಳಿ ನಡೆಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಮೃದ್ಧ ಕರ್ನಾಟಕ ಮೋದಿ ಜೀ ಅವರ ಆದ್ಯತೆಯಾಗಿರುವಾಗ ಆರ್ಥಿಕ ತಾರತಮ್ಯದ ಸುಳ್ಳು ಕಂತೆ ಹೊತ್ತು ಚಲೋ ದಿಲ್ಲಿ ಬದಲು ಬರಗಾಲದಿಂದ ತತ್ತರಿಸಿರುವ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ಚಲೋ ಹಳ್ಳಿ’ ಕಾರ್ಯಕ್ರಮ ಆರಂಭಿಸಿ ನಿಮ್ಮೊಂದಿಗೆ ನಾವೂ ಬರುತ್ತೇವೆ ಎಂದಿದ್ದಾರೆ.


