nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ, ಮಹಾರಾಷ್ಟ್ರ ತಾಯಿ-ಚಿಕ್ಕಮ್ಮ ಇದ್ದಂತೆ: ಸಂಸದ ಡಾ. ಅಮೋಲ್ ಕೋಲ್ಹೆ
    ಜಿಲ್ಲಾ ಸುದ್ದಿ January 15, 2023

    ಕರ್ನಾಟಕ, ಮಹಾರಾಷ್ಟ್ರ ತಾಯಿ-ಚಿಕ್ಕಮ್ಮ ಇದ್ದಂತೆ: ಸಂಸದ ಡಾ. ಅಮೋಲ್ ಕೋಲ್ಹೆ

    By adminJanuary 15, 2023No Comments3 Mins Read
    karnataka ,maharastra

    ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರ ತಾಯಿ-ಚಿಕ್ಕಮ್ಮ ಇದ್ದಂತೆ. ಈ ಪ್ರದೇಶದಲ್ಲಿ ಇರುವ ಪ್ರತಿಯೊಬ್ಬರಿಗೆ ತಾಯಿ ಪ್ರೀತಿ ಇದ್ದಷ್ಟು ಚಿಕ್ಕಮ್ಮನ ಪ್ರೀತಿಯೂ ಸಿಗುತ್ತದೆ ಎಂದು ಖ್ಯಾತ ನಟ, ಮಹಾರಾಷ್ಟ್ರ ಸಂಸದ ಡಾ. ಅಮೋಲ್ ಕೋಲ್ಹೆ ಹೇಳಿದರು.

    ಯಮಕನಮರಡಿ ಮತಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಬಹುಜನ ಸಮಾಜ, ಕಡೋಲಿಯ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಸಮಿತಿ ಹಾಗೂ ಕಡೋಲಿ ಗ್ರಾಮ ಪಂಚಾಯತ್‌ ವತಿಯಿಂದ ಹಮ್ಮಿಕೊಂಡಿದ್ದ ಸ್ವರಾಜ ಸಂಕಲ್ಪ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ಪ್ರೀತಿ ಹಾಗೂ ಶಿವಭಕ್ತಿಗೆ ಗಡಿ ಇರುವುದಿಲ್ಲ. ಇಂಥ ಒಂದು ಬಾಂಧವ್ಯ, ಅನ್ಯೋನ್ಯತೆಯ ಪ್ರದೇಶ ಇದು. ಇವು ಗಡಿ ಮೀರಿ ವ್ಯಾಪಿಸಿಕೊಂಡಿವೆ. ಈ ಎರಡೂ ರಾಜ್ಯಗಳು ರಾಷ್ಟ್ರದ ಪ್ರತೀಕ. ಮಾತೃಭಾಷೆಯ ಅಭಿಮಾನ ಇರಬೇಕು. ಅದು ಅತಿರೇಕಕ್ಕೆ ಹೋಗಬಾರದು. ಎಲ್ಲರೂ ಪ್ರೀತಿ ಸಹಬಾಳ್ವೆಯಿಂದ ಭಾಷೆಯನ್ನು ಗೌರವಿಸಬೇಕು ಮತ್ತು ಪ್ರೀತಿಸಬೇಕೆಂದು ಸಲಹೆ ನೀಡಿದರು.

    ಮಾತೃಭಾಷೆಯ ಮೇಲೆ ಪ್ರತಿಯೊಬ್ಬರಿಗೆ ಅಭಿಮಾನ ಹಾಗೂ ಪ್ರೀತಿ ಇರಬೇಕು. ಆದರೆ ಅನ್ಯ ಭಾಷೆಯನ್ನು ದ್ವೇಷಿಸುವ ಮನಸ್ಥಿತಿ ಇರಬಾರದು. ಜಾತಿ ಮತ್ತು ಧರ್ಮ ಎರಡೂ ಕಲ್ಲುಗಳಿದ್ದಂತೆ. ಈ ಕಲ್ಲಿನಿಂದ ಗೋಡೆ ಕಟ್ಟಿದರೆ ಪರಸ್ಪರ ಮನುಷ್ಯ ಪ್ರತೇಕವಾಗುತ್ತಾನೆ.

    ಇದೇ ಕಲ್ಲಿನಿಂದ ಸೇತುವೆ ನಿರ್ಮಿಸಿದರೆ ಪರಸ್ಪರರು ಸಂಪರ್ಕ ಸಾಧಿಸಲು ಸಾಧ್ಯವಾಗುತ್ತದೆ. ಈ ಕಲ್ಲುಗಳನ್ನು ಯುವಕರು ಕೈ ಯಲ್ಲಿ ಕೊಟ್ಟು ಬೇರೆಯವರು ತಲೆ ಒಡೆಯಲು ಹೇಳಿ ದ್ವೇಷ ಭಾವನೆ ಹುಟ್ಟಿಸಿ ಪ್ರಚೋದಿಸುವ ಮನಸ್ಥಿತಿಯವರೂ ಇದ್ದಾರೆ. ಆದರೆ ಈ ಕಲ್ಲುಗಳನ್ನು ಮೂರ್ತಿಯಾಗಿ ಪರಿವರ್ತಿಸುವ ಮನಸ್ಥಿತಿ ನಮ್ಮದಾಗಬೇಕೆಂದು ಹೇಳಿದರು.

    ನಾವೇಲ್ಲರೂ ದೇಶ ಮೊದಲು ಎಂಬ ಭಾವನೆಯಿಂದ ಇದ್ದೇವೆ. ಭಾರತೀಯ ಕ್ರಿಕೆಟ್‌ ತಂಡದಲ್ಲಿ ರಾಹುಲ್‌ ದ್ರಾವಿಡ್‌, ಸಚಿನ್‌ ತೆಂಡೂಲ್ಕರ್‌, ವಿ.ಎಸ್.‌ ಲಕ್ಷ್ಮಣ್‌, ಮಹಮದ್‌ ಶಮ್ಮಿ ಹೀಗೆ ಅನೇಕ ಕ್ರೀಡಾಪಟುಗಳು ಆಡುವಾಗ ಅವರನ್ನು ನಾವು ಯಾವಾಗಲೂ ಒಂದು ರಾಜ್ಯ ಜಾತಿಗೆ ಸೀಮಿತಗೊಳಿಸುವುದಿಲ್ಲ.

    ಅವರ ಆಟವನ್ನು ಮೆಚ್ಚಿ, ಪ್ರತಿಯೊಬ್ಬ ಭಾರತೀಯರು ಹುರಿದುಂಬಿಸುತ್ತಾರೆ. ನಾವೆಲ್ಲರೂ ಭಾರತೀಯ ಎಂಬ ಭಾವನೆ ಇರುತ್ತದೆ. ಜಾತಿ, ಧರ್ಮ,ಭಾಷೆ ಹೆಸರಿನಲ್ಲಿ ಪ್ರತೇಕವಾಗುವ ಬದಲು ರಾಷ್ಟ ಮೊದಲು ಎಂಬ ಮನಸ್ಥಿತಿ ನಮ್ಮದಾಗಬೇಕು ಎಂದು ಕರೆ ನೀಡಿದರು.

    ಛತ್ರಪತಿ ಶಿವಾಜಿ ಮಹಾರಾಜರನ್ನು 350 ವರ್ಷಗಳ ನಂತರವೂ ನಾವು ನೆನಪಿಸಿಕೊಳ್ಳುತ್ತೇವೆ. ಇನ್ನೂ ಅವರು ಜೀವಂತವಾಗಿ ಉಳಿದುಕೊಂಡಿದ್ದಾರೆ. ಜಗತ್ತಿನ ಯಾವ ಪ್ರದೇಶದಲ್ಲಿಯೂ ಶಿವಾಜಿ ಮಹಾರಾಜರಂತೆ ಪರಾಕ್ರಮಿ, ಧೈರ್ಯ ಶಾಲಿ ರಾಜನಿಲ್ಲ. ರಾಜನಾಗಿ ಜನಸಿಲ್ಲ. ಅವರು ಯಾರ ಬೆನ್ನಿಗೆ ಚೂರಿಹಾಕಿ ಸಾಮ್ರಾಜ ಕಟ್ಟಲಿಲ್ಲ.

    ರಾಜನಾಗಿ ಮೆರೆದು ಹಿಂದವಿ ಸ್ವರಾಜ್ಯ ಸಂಕಲ್ಪ ಮಾಡಿದ ಮಹರಾಜ ನಮ್ಮ ಛತ್ರಪತಿ ಶಿವಾಜಿ ಮಹಾರಾಜರು. ದೇವರು ಇದ್ದಾನೋ ಇಲ್ಲವೋ ಗೊತ್ತಿಲ್ಲ. ಆದರೆ ಶಿವಾಜಿ ಮಹಾರಾರಲ್ಲಿಯ ಮಾನವೀಯತೆಯ ಕಾರ್ಯದಿಂದ ಅವರು ನಮ್ಮಲ್ಲಿ ದೇವರಾಗಿ ಉಳಿದುಕೊಂಡಿದ್ದಾರೆ. ಜಾತಿ, ಧರ್ಮ, ಭಾಷೆಕ್ಕಿಂತ ಅವರ ಕಾರ್ಯದಿಂದ ಅಜರಾಮರಾಗಿದ್ದಾರೆ ಎಂದು ಹೇಳಿದರು.

    ಮನುಷ್ಯನಿಗಾಗಿ ಧರ್ಮ ಇಲ್ಲ. ಧರ್ಮಕ್ಕಾಗಿ ಮನುಷ್ಯ ಇದ್ದಾನೆ. ಮಾನವೀತೆಯ ಆಧಾರದ ಮೇಲೆ ಬದುಕಬೇಕು. ರಾಷ್ಟ್ರ ಜೀವಂತವಾಗಿದ್ದರೆ ನಾವೆಲ್ಲರೂ ಇರಲು ಸಾಧ್ಯ. ಮಣ್ಣು ಮಾತೆಯನ್ನು ಪ್ರೀತಿಸಬೇಕು. ಪ್ರಚೋದನೆ ಮಾಡುವುದುಕ್ಕಿಂತ ಬಾಂಧವ್ಯ, ಸೌಹಾರ್ದತೆ ಬೆಳೆಸಬೇಕು ಎಂದರು.

    ಕಸಾಬಾ ನೂಲ ರಾಮನಾಥ ಗಿರಿ ಸಮಾಧಿ ಮಠದ ಶ್ರೀ ಭಗವಾನ್‌ ಗಿರಿ ಮಹರಾಜ ಮಾತನಾಡಿ, ತಾಯಿ ಜೀಜಾಮಾತಾ ಆಶೀರ್ವಾದದಿಂದ ಛತ್ರಪತಿ ಶಿವಾಜಿ ಮಹಾರಾಜರು ಹಿಂದವಿ ಸ್ವರಾಜ್ಯ ಸ್ಥಾಪಿಸಿದರು. ಶಿವಾಜಿ ಮಹಾರಾಜರ ಧೈರ್ಯ, ಸ್ಥೈರ್ಯ ನಾವೆಲ್ಲರೂ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

    ದುರದುಂಡೀಶ್ವರ ವಿರಕ್ತಮಠದ ಶ್ರೀ ಗುರುಬಸವಲಿಂ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಭಾರತದಲ್ಲಿ ನಾವೆಲ್ಲ ಜನಿಸಿದ್ದೇ ಸುದೈವ. ಅನೇಕ ಧರ್ಮ, ಜಾತಿಗಳಿದ್ದರೂ ಅನ್ಯೋನ್ಯತೆಯಿಂದ ಬದುಕುತ್ತಿರುವುದು ಹೆಮ್ಮೆಯ ವಿಷಯ.

    ಭಾರತೀಯರಾದ ನಾವು ಧರ್ಮ ಸಹಿಷ್ಣುಗಳು. ಬದುಕಿನಲ್ಲಿ ನಾವೇನೂ ಗಳಿಸಿದರೂ ನಮ್ಮೊಂದಿಗೆ ಇರುವುದು ಧರ್ಮ ಮಾತ್ರ ಎಂದ ಅವರು, ಈ ಭಾಗದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿರುವ ಶಾಸಕ ಸತೀಶ್‌ ಜಾರಕಿಹೊಳಿ ಹಾಗೂ ತಂದೆಯಂತೆಯ ಸಾಮಾಜಿಕ ಕಾರ್ಯದಲ್ಲಿ ತೊಡಗಿದ ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಮಾಡಿ ಎಂದು ಕರೆ ನೀಡಿದರು.

    ಇದೇ ವೇಳೆ ಖ್ಯಾತ ನಟ, ಮಹಾರಾಷ್ಟ್ರ ಸಂಸದ ಡಾ. ಅಮೋಲ್ ಕೋಲ್ಹೆಅವರು ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್‌ ಜಾರಕಿಹೊಳಿ, ಎಪಿಎಂಸಿ ಮಾಜಿ ಅಧ್ಯಕ್ಷ ಆನಂದ ಪಾಟೀಲ್, ಯುವ ಅಘಾಡಿ ಅಧ್ಯಕ್ಷ ಭಾವು ಗಡ್ಕರಿ, ಕಡೋಲಿ ಗ್ರಾ.ಪಂ. ಮಾಜಿ ಅಧ್ಯಕ್ಷ ರಾಜು ಮೈನ್ನವರ, ರಾಜು ಮಾಯಣ್ಣಾ, ಮಾಜಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ಅಣ್ಣು ಕಟಾಂಬಳೆ, ಮನೋಹರ ಹುಕ್ಕೇರಿಕರ್, ಸಾಗರ ಪಿಂಗಟ್, ನಾಗೇಶ ಪಾಟೀಲ್, ಮಲಗೌಡ ಪಾಟೀಲ್‌, ಸಂದೀಪ್ ಜಕ್ಕಾಣೆ, ಚಂದ್ರಕಾಂತ ದುಡುಮ್, ಸಿದ್ದರಾಯ ಗವಿ, ವಿಜಯ ಹೊನಮನೆ, ವೀರಭದ್ರ ಮುಂಗಾರಿ, ರಾಮಾ ಕಡೊಲಕರ್ ಸೇರಿದಂತೆ ನೂರಾರು ಮುಖಂಡರು ಸೇರಿದಂತೆ ಯಮಕನಮರಡಿ ಮತಕ್ಷೇತ್ರದ ಸಾವಿಸಾರು ಜನ ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ

    March 9, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.