ನೆಲಮಂಗಲ: ರಾಜ್ಯ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಲಾವಣ್ಯ ಜಿ.ಎನ್.ರವರನ್ನು ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ರವರ ಆದೇಶದಂತೆ ಹಾಗೂ ಸಭೆಯ ಒಮ್ಮತದ ನಿರ್ಣಯದಂತೆ ರಾಜ್ಯಾಧ್ಯಕ್ಷರು ಆದೇಶ ಪತ್ರ ನೀಡಿ ನೇಮಕ ಮಾಡಿದರು.
ನೆಲಮಂಗಲದ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯ ಸಮಿತಿಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷೆಯಾಗಿ ಲಾವಣ್ಯ ಜಿ.ಎನ್. ಅವರಿಗೆ ಆದೇಶ ಪತ್ರ ನೀಡಲಾಯಿತು.
ರಾಜ್ಯ ಮಹಿಳಾ ಘಟಕದ ಅಧಿಕಾರ ವಹಿಸಿಕೊಂಡು ನೊಂದವರ ಧ್ವನಿಯಾಗಿ ಸಂಘಟನೆಯ ಜವಾಬ್ದಾರಿಯನ್ನು ವೇದಿಕೆಯ ತತ್ವ ಸಿದ್ದಂತಾಗಳಾಡಿಯಲ್ಲಿ ಕೆಲಸ ಮಾಡುವಂತೆ ಇದೇ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ಕೆ.ಆರ್.ರವರು ಮಾರ್ಗದರ್ಶನ ಮಾಡಿದರು.
ಇದೇ ಸಂದರ್ಭದಲ್ಲಿ ರಾಜ್ಯ ಸಾಮಾಜಿಕ ಜಾಲತಾಣದ ಘಟಕದ ಅಧ್ಯಕ್ಷರಾದ ಶ್ರೀನಿವಾಸ್ ಹೆಚ್.ಜಿ.ಗೌಡ, ರಾಜ್ಯ ಸಾಮಾಜಿಕ ಜಾಲತಾಣದ ಘಟಕದ ಸಂಘಟನಾ ಕಾರ್ಯದರ್ಶಿಯಾದ ಮಹೇಶ್ ಜಿ.ಗೌಡ ಹಾಗೂ ನೆಲಮಂಗಲ ತಾಲ್ಲೂಕು ಅಧ್ಯಕ್ಷರಾದ ಕಾಂತ್ ಕುಮಾರ್, ಉಪಾಧ್ಯಕ್ಷರಾದ ಗಂಗಾಧರ್, ಇನ್ನಿತರ ರಾಜ್ಯ ಸಮಿತಿಯ ಕಾರ್ಯಕರ್ತರು ಹಾಗೂ ನೆಲಮಂಗಲ ತಾಲ್ಲೂಕು ಸಮಿತಿ ಕಾರ್ಯಕರ್ತರು ಹಾಜರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy