ಕೊರಟಗೆರೆ : ಪಟ್ಟಣದ ಪ್ರವಾಸಿ ಮಂದರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ಯುವಕರು ಕರ್ನಾಟಕ ರಣಧೀರರ ವೇದಿಕೆಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಸಂಘಟನೆಯ ಕೆಲವೊಂದು ಹೋರಾಟಗಳನ್ನು ಗಮನಿಸಿ ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ ಎಂ.ಎನ್.ರವರ ನೇತೃತ್ವದಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ತಿಮ್ಮಪ್ಪ ಗೌಡರವರ ಅಧ್ಯಕ್ಷತೆಯಲ್ಲಿ ಸಂಘಟನೆಗೆ ಸೇರ್ಪಡೆಯಾದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು, ಕಳೆದ ಎರಡು ವರ್ಷಗಳಿಂದ ಕೊರಟಗೆರೆ ತಾಲ್ಲೂಕಿನಲ್ಲಿ ಸಂಘಟನೆಯು ನಾಡು ನುಡಿ ನೆಲ ಜಲ ಭಾಷೆಯ ವಿಚಾರದಲ್ಲಿ ಹಾಗೂ ತಾಲ್ಲೂಕಿನಲ್ಲಿರುವ ಜ್ವಲಂತ ಸಮಸ್ಯೆಗಳ ಕುರಿತು ಹೋರಾಟ ಮಾಡಿಕೊಂಡು ಬಂದಿದೆ. ಹಿಂದಿ ದಿವಸ್ ವಿರೋಧಿಸಿ ಬೃಹತ್ ಮಟ್ಟದ ಹೋರಾಟವನ್ನು ತಾಲ್ಲೂಕಿನಲ್ಲಿ ಮಾಡಲಾಗಿದೆ ಗ್ರಾಮೀಣ ಭಾಗದ ಬಡ ರೈತರ ಬಗರ್ ಹುಕ್ಕುಂ ಸಾಗುವಳಿ ಜಮೀನಿನ ವಿಚಾರವಾಗಿ ಸಂಘಟನೆಯು ಇಂದಿಗೂ ಸಹ ನಿರಂತರವಾದ ಹೋರಾಟವನ್ನು ಕೈಗೆತ್ತಿಕೊಂಡು ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ ಎಂ ಎನ್ ರವರ ಮತ್ತು ತಾಲ್ಲೂಕು ಪ್ರಧಾನ ಕಾರ್ಯದರ್ಶಿಯಾದ ಸುರೇಶ್ ಎನ್ ಎಸ್ ರವರ ನೇತೃತ್ವದಲ್ಲಿ ಮಾಡಿಕೊಂಡು ಬರಲಾಗುತ್ತಿದೆ ಇನ್ನು ಮುಂದೆಯೂ ಸಹ ಸಂಘಟನೆಯು ಬೃಹತ್ ಮಟ್ಟದಲ್ಲಿ ತಾಲ್ಲೂಕಿನ ಜ್ವಲಂತ ಸಮಸ್ಯೆಗಳ ಬಗ್ಗೆ ಹೋರಾಟಗಳನ್ನು ಮಾಡಲಾಗುವುದು ಎಂದು ತಿಳಿಸಿದರು.
ನಂತರ ಮಾತನಾಡಿದ ತಾಲ್ಲೂಕು ಅಧ್ಯಕ್ಷ ಮಂಜುಸ್ವಾಮಿ ಎಂ.ಎನ್., ಕಳೆದ ಎರಡು ವರ್ಷಗಳಿಂದ ನಮ್ಮ ಸಂಘಟನೆಯು ತಾಲೂಕಿನಲ್ಲಿ ಸತತವಾದ ಹೋರಾಟಗಳನ್ನು ಮಾಡಿಕೊಂಡು ಬಂದಿದೆ ಹೆಚ್ಚಾಗಿ ಗ್ರಾಮೀಣ ಭಾಗದ ಜನರ ನೋವುಗಳಿಗೆ ಸ್ಪಂದಿಸುವಂತಹ ಕಾರ್ಯದಲ್ಲಿ ತೊಡಗಿರುವ ನಮ್ಮ ಸಂಘಟನೆಗೆ ಯುವ ಜನರ ಬೆಂಬಲವು ಹೆಚ್ಚಾಗುತ್ತಿದ್ದು ನಮ್ಮ ಸಂಘಟನೆಗೆ ಆನೆ ಬಲ ತಂದಂತಾಗಿದೆ ಮುಂಬರುವ ದಿನಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರ ಸದಸ್ಯತ್ವ ನೊಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಈಗಾಗಲೇ ತೀರ್ಮಾನಿಸಲಾಗಿದೆ.
ಸಂಘಟನೆಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಸಂಘಟನೆಗೆ ಸೇರ್ಪಡೆಯಾದ ಯುವಕರಿಗೆ ಈಗಾಗಲೇ ಜವಾಬ್ದಾರಿಯನ್ನು ನೀಡಲಾಗಿದೆ ರಾಜ್ಯಾಧ್ಯಕ್ಷರ ಮಾರ್ಗದರ್ಶನದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಕೆ ಎನ್ ದೇವರಾಜುರವರ ನೇತೃತ್ವದಲ್ಲಿ ಸಂಘಟನೆಯ ಮುಂದುವರೆಯಲಿದೆ ಎಂದು ತಿಳಿಸಿದರು..
ಇಪ್ಪತ್ತಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ:
ಇದೇ ಸಂದರ್ಭದಲ್ಲಿ ತಾಲ್ಲೂಕು ಗೌರವಾಧ್ಯಕ್ಷರಾಗಿ ಸಿದ್ದರಬೆಟ್ಟದ ಪ್ರದೀಪ್ ಎಂ, ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಎನ್ ಎಸ್, ತಾಲೂಕು ಉಪಾಧ್ಯಕ್ಷರಾಗಿ ರವಿಕುಮಾರ್ ವಿ.ಡಿ ಮತ್ತು ಸಂಜಯ್ ಕುರಂಕೋಟೆ,ತಾಲ್ಲೂಕು ಸಂಘಟನಾ ಕಾರ್ಯದರ್ಶಿಯಾಗಿ ಮುತ್ತುರಾಜ್, ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಕುಮಾರ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾಗಿ ದೊಡ್ಡಯ್ಯ ಬಿ. ಎಸ್, ಮಾಧ್ಯಮ ಘಟಕದ ಅಧ್ಯಕ್ಷರಾಗಿ ಸಿದ್ದರಾಜು ಕೆ, ಸಹ ಕಾರ್ಯದರ್ಶಿಯಾಗಿ ಅನಂತ್ ಕುಮಾರ್, ಬಾಬು ನಾಯ್ಕ, ಶ್ರೀನಿವಾಸ್, ರೈತ ಘಟಕದ ಮುಖಂಡರಾಗಿ ರಾಮಚಂದ್ರಯ್ಯ ಆಯ್ಕೆಯಾದರು.ಆಯ್ಕೆಯಾದ ಸದಸ್ಯರಿಗೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ ಆರ್ ಶಂಕರ್ ಗೌಡ್ರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ತಿಮ್ಮಪ್ಪ ಗೌಡರವರು ನೇಮಕಾತಿ ಆದೇಶ ಪತ್ರವನ್ನು ವಿತರಿಸಿ ಸನ್ಮಾನಿಸಿದರು…
ವರದಿ: ಮಂಜುಸ್ವಾಮಿ ಎಂ ಎನ್. ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA