nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಣಧೀರರ ವೇದಿಕೆ: ಕುಮಟಾ ಮತ್ತು ಭಟ್ಕಳ ಘಟಕಗಳ ಉದ್ಘಾಟನೆ
    ಜಿಲ್ಲಾ ಸುದ್ದಿ September 22, 2025

    ಕರ್ನಾಟಕ ರಣಧೀರರ ವೇದಿಕೆ: ಕುಮಟಾ ಮತ್ತು ಭಟ್ಕಳ ಘಟಕಗಳ ಉದ್ಘಾಟನೆ

    By adminSeptember 22, 2025No Comments2 Mins Read
    ranadheera

    ಕುಮಟಾ: ಕರ್ನಾಟಕ ರಣಧೀರ ವೇದಿಕೆ ಕುಮಟಾ ಹಾಗೂ ಭಟ್ಕಳ ತಾಲೂಕು ಘಟಕ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಕುಮಟಾದ ಮಿರ್ಜಾನ್‌ ನ ಡಾ.ಬಿ.ಆರ್.ಅಂಬೇಡ್ಕ‌ರ್ ಭವನದಲ್ಲಿ ಭವ್ಯವಾಗಿ ನೆರವೇರಿತು.

    ಕಾರ್ಯಕ್ರಮಕ್ಕೆ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ಜೊತೆಗೆ ರಾಜ್ಯ ಸಮಿತಿಯ ಹಲವು ಸದಸ್ಯರು ಬೆಂಗಳೂರಿನಿಂದ ಆಗಮಿಸಿದ್ದರು. ಮಹೇಶ್ ಗೌಡ ಅವರ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.


    Provided by
    Provided by

    ಉತ್ತರ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ಕುಮಾರಿ ಸುಪ್ರಿಯಾ ವಿಷ್ಣು ನಾಯ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, “ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ನಮಗೆ ಸದಾ ಅಭಿಮಾನ ಇರಬೇಕು. ಅವಕ್ಕೆ ಧಕ್ಕೆ ಉಂಟಾದಾಗ ಧ್ವನಿ ಎತ್ತುವುದು ನಮ್ಮ ಕರ್ತವ್ಯ. ಜೊತೆಗೆ ಶೋಷಿತರ ಪರವಾಗಿ ನಿಲ್ಲುವ ಸಂಘಟನೆ ಆಗಬೇಕಿದೆ” ಎಂದು ಹೇಳಿದರು.

    ನಂತರ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ದೀಪ ಬೆಳಗಿಸಿ ಘಟಕವನ್ನು ಉದ್ಘಾಟಿಸಿದರು.

    ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು “ಕರ್ನಾಟಕ ರಣಧೀರರ ವೇದಿಕೆಯು ಕೇವಲ ಹೋರಾಟಗಳಿಗೆ ಸೀಮಿತವಾಗಿಲ್ಲ. ಈ ಸಂಘಟನೆ ನಾಡಿನ ನೆಲ, ಜಲ, ಭಾಷೆಯ ಅಸ್ಮಿತೆಯನ್ನು ಕಾಪಾಡುವ ಧ್ವನಿಯಾಗಿದೆ. ಕನ್ನಡಿಗನೇ ಕರ್ನಾಟಕದಲ್ಲಿ ಸಾರ್ವಭೌಮ, ಕರ್ನಾಟಕದಲ್ಲಿ ಕನ್ನಡಿಗನಿಗೆ ಅನ್ಯಯವಾದರೆ ನಾವು ಸಹಿಸುವುದಿಲ್ಲ, ಸಂಘಟನೆಯಲ್ಲಿ ಶಕ್ತಿ ಇದ್ದರೆ ಎಲ್ಲವೂ ಸಾಧ್ಯ” ಎಂದು ಸ್ಪೂರ್ತಿದಾಯಕ ಮಾತುಗಳನ್ನಾಡಿದರು.

    ಕರ್ನಾಟಕ ರಣಧೀರ ವೇದಿಕೆಯ ನೂತನ ಕುಮಟಾ ತಾಲೂಕು ಅಧ್ಯಕ್ಷರಾಗಿ ಸಮೀರ್ ಅಹಮದ್ ಮಹಮ್ಮದ್ ಗೌಸ ಹಾಗೂ ಭಟ್ಕಳದ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಶನಿಯಾರ ನಾಯ್ಕ ಅವರಿಗೆ ನೇಮಕಾತಿ ಮಾಡಿದ್ದೂ ಸದರಿಯವರಿಗೆ ನೇಮಕಾತಿ ಆದೇಶವನ್ನು ನೀಡಲಾಯಿತು.

    ಇದರ ಜೊತೆಗೆ ಕುಮಟಾ ಹಾಗೂ ಭಟ್ಕಳ ತಾಲೂಕಿನ ಇತರ ಪದಾಧಿಕಾರಿಗಳಿಗೂ ನೇಮಕಾತಿ ಆದೇಶ ಹಾಗೂ ಗುರುತಿನ ಚೀಟಿಯನ್ನು ವಿತರಿಸಲಾಯಿತು.

    ಈ ಸಂದರ್ಭದಲ್ಲಿ ಕರಾವಳಿ ಕರ್ನಾಟಕ ವಿಭಾಗದ ಅಧ್ಯಕ್ಷರು ಹಾಗೂ ಜಿಲ್ಲಾ ಅಧ್ಯಕ್ಷರಾದ ಸೂರಜ್ ಪಾಂಡುರಂಗ ನಾಯ್ಕ ಮಾತನಾಡಿ “ಸಂಘಟನೆಯ ಪ್ರತಿಯೊಬ್ಬರೂ ಕಷ್ಟದಲ್ಲಿರುವವರಿಗೆ ನೆರವಾಗಬೇಕು. ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಜಿಲ್ಲಾಸಮಿತಿ ಹಾಗೂ ರಾಜ್ಯಾಧ್ಯಕ್ಷರು ಸದಾ ಬೆನ್ನೆಲುಬಾಗಿ ನಿಲ್ಲಲಿದ್ದಾರೆ.  ಮುಂದಿನ ದಿನಗಳಲ್ಲಿ ದಾಂಡೇಲಿ ಸೇರಿದಂತೆ ವಿವಿಧ ಘಟಕಗಳ ಉದ್ಘಾಟನೆ ನಡೆಯಲಿದೆ” ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ರಾಜ್ಯ ಪದಾಧಿಕಾರಿಗಳಾದ ಭೈರವ್, ಮೂರ್ತಿ, ಮಹೇಶ್ ಗೌಡ ಜಿ, ಪ್ರವೀಣ್‌ ಗೌಡ, ಶಿವರಾಜ್ ಗೌಡ ಹಾಗೂ ಲೋಕೇಶ್ ಎಸ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ನೂತನ ತಂಡಕ್ಕೆ ಶುಭ ಹಾರೈಸಿದರು.

    ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಸುಪ್ರಿಯಾ ವಿಷ್ಣು ನಾಯ್ಕ, ಜಿಲ್ಲಾ ಉಪಾಧ್ಯಕ್ಷ ಕಿರಣ ಚಂದ್ರಹಾಸ್ ಗಾಂವಕರ ಹಾಗೂ ಉತ್ತರ ಕನ್ನಡ ಜಿಲ್ಲಾ ಘಟಕದ ಸರ್ವ ಪದಾಧಿಕಾರಿಗಳ ಸಾನ್ನಿಧ್ಯವು ಕಾರ್ಯಕ್ರಮಕ್ಕೆ ಮೆರುಗು ನೀಡಿತು.

    ಈ ಸಂದರ್ಭದಲ್ಲಿ ಕುಮಟಾ ಮತ್ತು ಭಟ್ಕಳದ ನೂತನ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು…

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.