ಯಾದಗಿರಿ: ಜಿಲ್ಲೆಯ ಸುರಪುರ ನಗರದಿಂದ ಮಹಾರಾಷ್ಟ್ರದ ಪುಣೆ ನಗರಕ್ಕೆ ತೆರಳಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಮೇಲೆ ದುಸ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್ ಹಾಗೂ ಶಿವಸೇನಾ ಬೆಂಬಲಿಗರು ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಮಾಡಿ ಪುಂಡಾಟ ಮೆರೆದಿದ್ದರು, ಇದಕ್ಕೆ ಕನ್ನಡಿಗರು ಒಗ್ಗಟ್ಟಾಗಿ ಪ್ರತಿಭಟಿಸುತ್ತಿರುವುದರಿಂದ ಆಕ್ರೋಶಗೊಂಡಿರುವ ಅಲ್ಲಿನ ಕೆಲ ಕಿಡಿಗೇಡಿಗಳು ಪ್ರತಿಕಾರವಾಗಿ ಬಸ್ ನ ಮೇಲೆ ಕಲ್ಲು ತೂರಿರುವುದರಿಂದ ಗ್ಲಾಸ್ ಗಳು ಒಡೆದಿವೆ ಎಂಬ ಆರೋಪ ಕೇಳಿ ಬಂದಿದೆ.
ಬಸ್ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದು, ಆರೋಪಿಗಳ ಬಂಧನಕ್ಕೆ ವ್ಯಾಪಕ ಒತ್ತಡ ಕೇಳಿ ಬರುತ್ತಿದೆ.
ವರದಿ : ಆನಂದ್ ತಿಪಟೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700