ಬೆಳಗಾವಿ: ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ , ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ದಿನ 2023 ಮತ್ತು ಮೇಳದ ಪೂರ್ವಭಾವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಸಾವಯವ ಕೃಷಿಯತ್ತ ಜನರು ಮುಖ ಮಾಡಿದ್ದು, ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ. ಇಂದು ವಿಶ್ವದಲ್ಲಿ ಸಿರಿಧಾನ್ಯವನ್ನು ಆಚರಿಸಲಾಗುತ್ತಿದೆ ಎಂದರು.
ಜನರಲ್ಲಿ ಹಾಗೂ ರೈತರಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಇವುಗಳಿಗೆ ಮಾರುಕಟ್ಟೆ ಒದಗಿಸಬೇಕು. ಕಳೆದ 20 ವರ್ಷಗಳಿಂದ ಸಾವಯವ ಕೃಷಿ ಪದ್ಧತಿಗೆ ಒತ್ತು ನೀಡಲಾಗುತ್ತಿದೆ. ಅದಕ್ಕೆ ಕೃಷಿ ಇಲಾಖೆಯವರು ಪೂರಕ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದರು.


