ಬೆಂಗಳೂರು: ಮೇ 19ರಂದು ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದರು. ಇದೀಗ ನಾಳೆ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧವಾಗಿದೆ.
ಇನ್ನೊಂದೆಡೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕಾತರದಿಂದ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನದ ವೇಳೆಗೆ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಹೊರ ಬೀಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ನಾಳೆ ಪರೀಕ್ಷೆ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು karresults.nic.in ಮತ್ತು sslc.karnataka.gov.in ವೆಬ್ ಸೈಟ್ ಗಳಿಗೆ ಭೇಟಿ ನೀಡಬಹುದಾಗಿದೆ. ಹಾಗೆಯೂ ಯಾರಿಗಾದರೂ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಲು ಸಾಧ್ಯವಾಗದಿದ್ದರೆ. ಮೇ 20ರಂದು ನಿಮ್ಮ ಶಾಲೆಗಳಲ್ಲಿಯೇ ಫಲಿತಾಂಶಗಳು ಪ್ರಕಟಗೊಳ್ಳಲಿದೆ. ಹಾಗಾಗಿ ವಿದ್ಯಾರ್ಥಿಗಳು ಆತಂಕಕ್ಕೀಡಾಗಬೇಕಾದ ಅಗತ್ಯವಿಲ್ಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5