ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಕರ್ನಾಟಕದ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷಕ್ಕೆ ಬಲ ನೀಡುವ ನಿಟ್ಟಿನಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಚಾರದಲ್ಲಿ ಭಾಗವಹಿಸುವಂತೆ ಇತ್ತೀಚೆಗೆ ಉದಯಪುರದಲ್ಲಿ ನಡೆದ ಚಿಂತನ ಶಿಬಿರದಲ್ಲಿ ಪಕ್ಷದ ರಾಜ್ಯ ಮುಖಂಡರ ನಿಯೋಗ ಮನವಿ ಸಲ್ಲಿಸಿದೆ. ಅವರು ಬಹುತೇಕ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಅವರು ಹೇಳಿದರು.
ಇತ್ತೀಚೆಗಷ್ಟೇ ಉದಯಪುರದಲ್ಲಿ ನಡೆದ ಪಕ್ಷದ ಚಿಂತನ ಶಿಬಿರದಲ್ಲಿ ಶಿವಕುಮಾರ್ ಸೇರಿದಂತೆ ಕರ್ನಾಟಕ ಕಾಂಗ್ರೆಸ್ ನಾಯಕರು ಪ್ರಿಯಾಂಕಾ ಅವರನ್ನು ಕರ್ನಾಟಕದಿಂದ ರಾಜ್ಯಸಭೆ ಸ್ಥಾನಕ್ಕೆ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದಾರೆ, ಪ್ರಿಯಾಂಕಾ ಸ್ಪರ್ಧಿಸುವುದರಿಂದ ಪಕ್ಷದ ನೈತಿಕತೆ ಹೆಚ್ಚುತ್ತದೆ 2023 ರ ವಿಧಾನಸಭಾ ಚುನಾವಣೆಯು ಕಾಂಗ್ರೆಸ್ ಪಕ್ಷಕ್ಕೆ ನಿರ್ಣಾಯಕವಾಗಿದೆ ಎಂದು ತಿಳಿಸಿದ್ದಾರೆ.
ಎಂಎಲ್‌ಸಿ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಪಕ್ಷದ ಹೈಕಮಾಂಡ್ ಮುಂದೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದೇವೆ ಎಂದು ಹೇಳಿದರು. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಷ್ಟಪಡುವ ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB