ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನವೆಂಬರ್ 13ರಿಂದ ಹಿಂಗಾರು ಚುರುಕಾಗಿ ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ನವೆಂಬರ್ 13ರಿಂದ ಹಿಂಗಾರು ಚುರುಕಾಗಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ನವೆಂಬರ್ 14ರಿಂದ ಮೂರು ದಿನಗಳ ಕಾಲ ಸಂಜೆಯ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 18ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ತಿರುಗುವಿಕೆಯು ಶಿಥಿಲಗೊಳ್ಳುತ್ತಿದ್ದು, ಹಿಂಗಾರು ಚುರುಕಾಗಿದೆ.
ನವೆಂಬರ್ 18ರ ತನಕ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಹಿಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296