ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 18ರಿಂದ ಮಳೆಯ ಪ್ರಮಾಣ ಕಡಿಮೆಯಾಗಿ 20ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆ ಹಾಗೂ ಉಳಿದ ಭಾಗಗಳಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಒಳನಾಡು: ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ನವೆಂಬರ್ 18ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಈಗಿನಂತೆ ನವೆಂಬರ್ 21 ಅಥವಾ 22ರ ಸುಮಾರಿಗೆ ಉತ್ತರ ಸುಮಾತ್ರ ಕರಾವಳಿಯಲ್ಲಿ ಹಾಗೂ ಶ್ರೀಲಂಕಾದ ನೈರುತ್ಯ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿವೆ. ಇದರ ಪರಿಣಾಮವನ್ನು ಕಾದು ನೋಡಬೇಕಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q