ಬೆಂಗಳೂರು: ವಿಧಾನಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ಅಸಮಾಧಾನ, ಭಿನ್ನಮತ ಸ್ಫೋಟಗೊಂಡಿದೆ. ಇದೀಗ ಬಂಡಾಯ ತಣಿಸುವ ಜವಾಬ್ದಾರಿ ಹೊತ್ತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬುಧವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವಂತೆ ವರಿಷ್ಠರಿಂದ ಬಂದ ಸೂಚನೆಗೆ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಬಂಡಾಯವೆದ್ದಿದ್ದರು. ಅವರನ್ನು ದೆಹಲಿಗೆ ಕರೆಸಿಕೊಂಡು ಅವರ ಅಸಮಾಧಾನ ಶಮನಗೊಳಿಸುವಲ್ಲಿ ಹೈಕಮಾಂಡ್ ಬಹುಮಟ್ಟಿಗೆ ಯಶಸ್ವಿಯಾಗಿದೆ. ಆದಾಗ್ಯೂ, ರಾಜ್ಯದ ಹಲವೆಡೆ ಬಂಡಾಯ ಅಭ್ಯರ್ಥಿಗಳಿಂದ ಪಕ್ಷೇತರರಾಗಿ ಸ್ಪರ್ಧಿಸುವ ಬೆದರಿಕೆ, ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ ಮುಂದುವರಿದಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


