ಏರ್ ಶೋ ಭಾರತದ ಆತ್ಮವಿಶ್ವಾಸವನ್ನ ಮತ್ತಷ್ಟು ಹೆಚ್ಚಿಸಿದೆ. ಏರೋ ಶೋ ಮೂಲಕ ನವಭಾರತದ ಶಕ್ತಿ ಪ್ರದರ್ಶನಗೊಳ್ಳುತ್ತಿದೆ. ರಕ್ಷಣಾ ವಲಯದಲ್ಲಿ ಯುವಕರು ಹೆಚ್ಚಿನ ಸಾಧನೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.
ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ ಶೋ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಏರೋ ಇಂಡಿಯಾ ಶೋ ಭಾರತದ ಆತ್ಮವಿಶ್ವಾಸವನ್ನ ಮತ್ತಷ್ಟು ಹೆಚ್ಚಿಸಿದೆ. ಭಾರತ ಸೇನೆಯ ಸಾಮರ್ಥ್ಯವನ್ನ ಪ್ರತ್ಯಕ್ಷವಾಗಿ ನೋಡುತ್ತಿದ್ದೇವೆ ಕಳೆದ 5 ವರ್ಷಗಳಲ್ಲಿ ಭಾರತ ಸೇನೆ ಮತ್ತಷ್ಟು ಬಲಗೊಂಡಿದೆ. ಈಗ ಭಾರತ ದೂರದೃಷ್ಠಿ ಹಾಗೂ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದೆ. ರಕ್ಷಣಾ ಕ್ಷೇತ್ರಕ್ಕೆ ವಿದೇಶ ಬಂಡವಾಳ ಹರಿದು ಬರುತ್ತಿದೆ. ಏರೋ ಇಂಡಿಯಾ ಭಾರತಕ್ಕೆ ಒಂದು ಹೆಮ್ಮೆಯ ಸಂಗತಿ. ಏರ್ ಶೋ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ರಾಷ್ಟ್ರಗಳು ಭಾಗಿಯಾಗಿವೆ ಎಂದರು.
ಕರ್ನಾಟಕ ತಂತ್ರಜ್ಞಾನ ಕ್ಷೇತ್ರದಲ್ಲಿ ಬಹಳಷ್ಟು ಮುಂದುವರೆದಿದೆ. ರಕ್ಷಣಾ ವಲಯದಲ್ಲಿ ಯುವಕರು ಹೆಚ್ಚಿನ ಸಾಧನೆ ಮಾಡಬೇಕು ಎಂದು ಕರ್ನಾಟಕದ ಯುವಕರಿಗೆ ಪ್ರಧಾನಿ ಮೋದಿ ಕರೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


