nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ
    • ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!
    • 50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ
    • ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
    • ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ
    • ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು
    • ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ
    • ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದಿಂದ ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಆಯ್ಕೆಗೆ ಕಸರತ್ತು
    ರಾಜ್ಯ ಸುದ್ದಿ May 14, 2022

    ಕರ್ನಾಟಕದಿಂದ ರಾಜ್ಯಸಭೆಗೆ ಪ್ರಿಯಾಂಕಾ ಗಾಂಧಿ ಆಯ್ಕೆಗೆ ಕಸರತ್ತು

    By adminMay 14, 2022No Comments2 Mins Read
    preyank gandhi

    ವಿಧಾನಸಭೆಯಿಂದ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ವೇಳಾ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಆಕಾಂಕ್ಷಿಗಳ ಲಾಬಿ ಬಿರುಸುಗೊಂಡಿದ್ದು, ಕಾಂಗ್ರೆಸ್‍ನ ಪ್ರಭಾವಿ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಆರಿಸಿ ಕಳುಹಿಸುವ ತೆರೆಮರೆ ಕಸರತುಗಳು ಜೋರಾಗಿವೆ.

    ರಾಜ್ಯಸಭೆ ಸದಸ್ಯರಾದ ಬಿಜೆಪಿಯ ಕೆ.ಸಿ.ರಾಮಮೂರ್ತಿ, ನಿರ್ಮಿಲಾ ಸೀತಾರಾಮನ್, ಕಾಂಗ್ರೆಸ್‍ನ ಕೇಂದ್ರದ ಮಾಜಿ ಸಚಿವ ಜೈರಾಮ್ ರಮೇಶ್, ನಿಧನರಾದ ಆಸ್ಕರ್ ಫರ್ನಾಡಿಸ್ ಸೇರಿದಂತೆ ನಾಲ್ವರ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್ ಮರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

    ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಆರಿಸಿ ಕಳುಹಿಸಲು ತಯಾರಿ ನಡೆಸಿದ್ದಾರೆ. ಗಾಂಧಿ ಕುಟುಂಬದೊಂದಿಗೆ ಅಪಾರ ನಿಷ್ಠೆ ಹೊಂದಿರುವ ಡಿ.ಕೆ.ಶಿವಕುಮಾರ್ ಪಕ್ಷದ ಅಧ್ಯಕ್ಷರಾದಾಗ ಪ್ರಿಯಾಂಕ ಗಾಂಧಿ ದೂರವಾಣಿ ಕರೆ ಮಾಡಿ ಶುಭಾಷಯ ಹೇಳಿದ್ದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸಂಸದರಾಗಿದ್ದ ಪ್ರಿಯಾಂಕ ಗಾಂಧಿ ಅವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ನಡೆದ ಉತ್ತರ ಪ್ರದೇಶ ಚುನಾವಣೆಯಲ್ಲಿ ಗೆಲವಿಗಾಗಿ ಬಾರೀ ಕಸರತು ನಡೆಸಿದ ಪ್ರಿಯಾಂಕ ಯಶಸ್ವಿಯಾಗಲಿಲ್ಲ.

    ಬೇರೆ ಬೇರೆ ರಾಜ್ಯಗಳು ಪ್ರಿಯಾಂಕ ಅವರನ್ನು ರಾಜ್ಯಸಭೆಯಿಂದ ಆರಿಸಿ ಕಳುಹಿಸಲು ದುಂಬಾಲು ಬಿದ್ದಿವೆ. ಈ ಹಿಂದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ರಾಜಕೀಯವಾಗಿ ಹಿನ್ನೆಡೆ ಅನುಭವಿಸಿದಾಗ ನವ ಹುರುಪು ತುಂಬಿದ್ದೆ ಕರ್ನಾಟಕ. ಚಿಕ್ಕಮಗಳೂರು ಲೋಕಸಭೆಯಿಂದ ಚುನಾಯಿತರಾದ ಇಂದಿರಾ ಗಾಂಧಿ ಮತ್ತೆ ರಾಜಕೀಯದಲ್ಲಿ ವಿಜೃಂಭಿಸಿದರು. ಹಾಗಾಗಿ ಪ್ರಿಯಾಂಕ ಗಾಂಧಿ ಅವರನ್ನು ಕರ್ನಾಟಕದಿಂದ ಆರಿಸಿ ಕಳುಹಿಸಿದರೆ ಮುಂದೆ ಉಜ್ವಲ ಭವಿಷ್ಯ ಇರಲಿದೆ ಎಂಬ ನಂಬಿಕೆಯನ್ನು ಕಾಂಗ್ರೆಸಿಗರು ಹೊಂದಿದ್ದಾರೆ.

    ಅದಕ್ಕಾಗಿ ಜೈರಾಮ್ ರಮೇಶ್ ಅವರಿಗೆ ಟಾಂಗ್ ಕೊಟ್ಟು ಪ್ರಿಯಾಂಕ ಗಾಂಧಿ ಅವರಿಗೆ ಮಣೆ ಹಾಕಲು ತೆರೆ ಮರೆಯ ಕಸರತು ನಡೆಯುತ್ತಿವೆ. ಜೈರಾಮ್ ರಮೇಶ್ ಅವರಿಂದ ರಾಜ್ಯ ರಾಜಕಾರಣಕ್ಕೆ ಯಾವುದೇ ನೆರವಾಗಿಲ್ಲ. ರಾಷ್ಟ್ರ ಮಟ್ಟದಲ್ಲೂ ಜಿ-23 ಬಳಗದಲ್ಲಿ ಜೈರಾಮ್ ರಮೇಶ್ ಗುರುತಿಸಿಕೊಂಡಿದ್ದರು. ಹೀಗಾಗಿ ಅವರನ್ನು ಮತ್ತೆ ಕರ್ನಾಟಕದಿಂದ ಚುನಾಯಿಸಬಾರದು ಎಂಬ ವಾದಗಳು ಕೇಳಿ ಬರುತ್ತಿವೆ.

    ರಾಜಸ್ಥಾನದ ಉದಯಪುರ್‍ನಲ್ಲಿ ನಡೆಯುತ್ತಿರುವ ಚಿಂತನ್ ಶಿವಿರ್‍ನಲ್ಲಿ ಒಂದು ಕುಟುಂಬ ಒಂದು ಟಿಕೆಟ್ ಎಂಬ ನಿಯಮ ರೂಪಿಸುವ ತಯಾರಿ ನಡೆದಿದೆ. ಅದು ಅಂಗೀಕಾರಗೊಂಡರೆ ಪ್ರಿಯಾಂಕ ಗಾಂಧಿ ಅವರ ರಾಜ್ಯಸಭೆ ಪ್ರವೇಶದ ಕನಸು ಭಗ್ನವಾಗಲಿದೆ. ಇಲ್ಲವಾದರೆ ಕರ್ನಾಟಕದಿಂದಲೇ ಅವರನ್ನು ರಾಜಕಾರಣದ ಮುಖ್ಯವಾಹಿನಿಗೆ ತರಬೇಕು ಎಂಬ ಉಮೇದುಗಳು ರಾಜ್ಯ ನಾಯಕರಲ್ಲಿ ಜೋರಾಗಿ ನಡೆಯುತ್ತಿವೆ.ಆದರೆ ದೆಹಲಿಯ ನಾಯಕರು ಜೈರಾಮ್ ರಮೇಶ್ ಅವರನ್ನು ಪುನರಾಯ್ಕೆ ಮಾಡುವಂತೆ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಜೈರಾಮ್ ರಮೇಶ್ ಬೇಡ ಎಂದಾದರೆ ರಾಜ್ಯಸಭೆ ಪ್ರವೇಶಿಸಲು ಹಲವು ನಾಯಕರು ನಾ ಮುಂದು ತಾ ಮುಂದು ಎಂದು ಮುಗಿ ಬಿದಿದ್ದಾರೆ.

    ಇನ್ನು ವಿಧಾನ ಪರಿಷತ್‍ನಲ್ಲಿ ಏಳು ಸ್ಥಾನಗಳು ತೆರವಾಗಲಿವೆ. ಆರ್.ಬಿ.ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ, ಎಸ್.ವೀಣಾ ಅಚ್ಚಯ್ಯ, ಕೆ.ವಿ.ನಾರಾಯಣಸ್ವಾಮಿ, ಲಹರ್ ಸಿಂಗ್ ಸಿರೋಯಾ, ಎಚ್.ಎಂ.ರಮೇಶ್‍ಗೌಡ, ಲಕ್ಷ್ಮಣ ಸಂಗಪ್ಪ ಸವದಿ ಅವರಿಂದ ತೆರವಾಗುತ್ತಿರುವ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ನಿರಾಯಸವಾಗಿ ಗೆಲ್ಲಬಹುದಾಗಿದೆ. ಅದಕ್ಕಾಗಿ 30ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ.

    ಎರಡರಲ್ಲಿ ಒಂದನ್ನು ಅಲ್ಪಸಂಖ್ಯಾತರಿಗೆ ಮತ್ತೊಂದನ್ನು ದಲಿತ ಸಮುದಾಯಕ್ಕೆ ನೀಡುವ ಚಿಂತನೆ ನಡೆದಿದೆ. ಮಾಜಿ ಸಚಿವ ಎಂ.ಆರ್.ಸೀತಾರಾಮ್, ಐವಾನ್ ಡಿ.ಸೋಜಾ, ಎಸ್.ಆರ್.ಪಾಟೀಲ್, ಜಯಮಾಲ, ಆರ್.ಬಿ.ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ ಸೇರಿದಂತೆ ಅನೇಕರು ಸಾಲಿನಲ್ಲಿದ್ದಾರೆ. ಹಿಂದೆ ಸದಸ್ಯರಾಗಿ ಕೆಲಸ ಮಾಡಿದವರಿಗೆ ಅವಕಾಶ ನೀಡಬೇಕೆ ಅಥವಾ ಹೊಸ ಮುಖಗಳಿಗೆ ಮಣೆ ಹಾಕಬೇಕೆ ಎಂಬ ಚರ್ಚೆಗಳು ನಡೆಯುತ್ತಿವೆ. ಚಿಂತನ್ ಶಿವಿರ್ ನಂತರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗಳು ಶುರುವಾಗಲಿವೆ.

    ರಾಜ್ಯಸಭೆಗೆ ಎರಡನೇ ಅಭ್ಯರ್ಥಿ ಹಾಕುವುದು, ವಿಧಾನಸಭೆಗೆ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಜೆಡಿಎಸ್‍ಗೆ ಪೈಪೋಟಿ ನೀಡಲು ಕಾಂಗ್ರೆಸ್‍ನಲ್ಲಿ ಒಂದು ಬಣ ಪಟ್ಟು ಹಿಡಿದಿದೆ. ಆದರೆ ಕಾಂಗ್ರೆಸ್ ಉನ್ನತ ವಲಯದಲ್ಲಿ ಜೆಡಿಎಸ್ ಬಗ್ಗೆ ಮೃದು ಧೋರಣೆ ಇರುವುದರಿಂದ ಹೆಚ್ಚುವರಿ ಅಭ್ಯರ್ಥಿಗಳ ಕುರಿತು ಚರ್ಚಿಸಿ ತಿರ್ಮಾನಿಸುವಂತೆ ಸಲಹೆ ಕೇಳಿ ಬಂದಿದೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    Leave A Reply Cancel Reply

    Our Picks

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಕೊರಟಗೆರೆ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರೀಡಾಂಗಣಗಳನ್ನು ನಿರ್ಮಿಸುವುದರಿಂದ ಗ್ರಾಮೀಣ ಭಾಗದಲ್ಲಿ ಹೆಚ್ವಿನ ಕ್ರೀಡಾಪಟುಗಳು ರೂಪುಗೊಳ್ಳಲು ಸಾಧ್ಯ. ಗ್ರಾಮೀಣ ಕ್ರೀಡೆಗಳು ಜೀವಂತವಾಗಿದ್ದಾಗ…

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026

    ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

    October 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.