ಹೈದರಾಬಾದ್: ಐಪಿಎಸ್ ಅಧಿಕಾರಿಯಾಗುವ ಕನಸು ನನಸಾಗಿಸಲು, ಕ್ರಿಕೆಟ್ ಆಟಗಾರ ಕಾರ್ತಿಕ್ ಮಧಿರಾ ತನ್ನ ವೃತ್ತಿಯನ್ನೇ ತೊರೆದ ಘಟನೆ ಇದೀಗ ಯುವ ಜನತೆಗೆ ಸ್ಪೂರ್ತಿಯಾಗಿದೆ.
ಮೂಲತಃ ತೆಲಂಗಾಣದ ಹೈದರಾಬಾದ್ ನ ಕಾರ್ತಿಕ್ ಮಧಿರಾ, ಅಂಡರ್–13, ಅಂಡರ್–15, ಅಂಡರ್–17, ಮತ್ತು ಅಂಡರ್–19 ಹಂತಗಳಲ್ಲಿ ಹಾಗೂ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಕ್ರಿಕೆಟ್ ಆಟಗಾರರಾಗಿದ್ದರು. ಅವರು ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಎಂಜಿನಿಯರಿಂಗ್ ಪದವಿ ಗಳಿಸುತ್ತಾರೆ.
ಕಾರ್ತಿಕ್ ಅವರು ತಮ್ಮ ವೈಯಕ್ತಿಕ ಕಾರಣಗಳಿಂದ ಹಾಗೂ ಗಾಯದಿಂದಾಗಿ ತಮ್ಮ ಕ್ರಿಕೆಟ್ ಅನ್ನು ತೊರೆಯುತ್ತಾರೆ. ಯುಪಿಎಸ್ ಸಿ ಬರೆದು ಐಪಿಎಸ್ ಅಧಿಕಾರಿಯಾಗುವ ಆಕಾಂಕ್ಷೆಯನ್ನು ಹೊಂದಿದ್ದ ಅವರು ಈ ವೇಳೆ ಅವರು ಡೆಲಾಯ್ಟ್ನಲ್ಲಿ 6 ತಿಂಗಳ ಕಾಲ ಕೆಲಸ ಮಾಡುತ್ತಾರೆ. ನಂತರ ತಮ್ಮ ವೃತ್ತಿಯನ್ನು ತೊರೆದು ಯುಪಿಎಸ್ ಸಿ ಪರೀಕ್ಷೆಗೆ ತಯಾರಿಯನ್ನು ನಡೆಸುತ್ತಾರೆ. ಇದೀಗ ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಅವರು ತಮ್ಮ ಕನಸ್ಸನ್ನು ನನಸು ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx