ಕೆ.ಆರ್.ನಗರ: ತಾಲ್ಲೋಕಿನ ಸಿದ್ದಾಪುರ ಗ್ರಾಮದ ಪುಟ್ಟಸ್ವಾಮಪ್ಪ ಎಂಬುವವರ ಮಗ ಸುಮಾರು ನಲವತ್ತೇಳು ವರ್ಷದ ಅರವಿಂದ ಎಂಬುವವರು ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುವ ಸಂಧರ್ಭದಲ್ಲಿ ದಿನಾಂಕ ಮಾರ್ಚ್ ಎಂಟರಂದು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹುಣಸೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಅರವಿಂದರವರ ಬಳಗದ ಗೋಳು ಮುಗಿಲು ಮುಟ್ಟಿದೆ.
ಹುಣಸೂರು ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸ್ವ ಗ್ರಾಮ ಸಿದ್ದಪುರದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.
ಮೃತರಿಗೆ ಎರಡೂ ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA