ಚಿಕ್ಕೋಡಿ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು,ಕಾರಿನಲ್ಲಿ ಸಂಚರಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ನಡೆದಿದೆ.
ಶುಕ್ರವಾರ ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಮದುವೆಗೆ ಹೊರಟ್ಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ನಿಪ್ಪಾಣಿ ನಗರದವರು ಎಂದು ಗರುತಿಸಲಾಗಿದೆ.
ಅದಗೊಂಡ ಪಾಟೀಲ್ ಮತ್ತು ಛಾಯಾ ಪಾಟೀಲ್ ದಂಪತಿ, ಇವರ ಮಗ ಮಹೇಶ್ ಪಾಟೀಲ್, ಅದಗೊಂಡ ಪಾಟೀಲ್ರ ತಾಯಿ ಚಾಪ್ಪಾತಾಯಿ ಮೃತ ದುರ್ದೈವಿಗಳು. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಟ್ಟರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB