ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಕರುನಾಡ ವಿಜಯ ಸೇನೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಅಧ್ಯಕ್ಷರಾದ ಎಚ್.ಎಸ್. ಸುರೇಶ್ ಅಧ್ಯಕ್ಷತೆಯಲ್ಲಿ ಆಹ್ವಾನ ಪತ್ರಿಕೆ ಬಿತ್ತಿ ಚಿತ್ರ ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಯಿಂದ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಎಸ್.ಸುರೇಶ್, ನವೆಂಬರ್ 28 2022ನೇ ಸೋಮವಾರ ಪಟ್ಟಣದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಸಂಘಟನೆಯ ವತಿಯಿಂದ ನಡೆಸಲಾಗುವುದು ಎಂದು ತಿಳಿಸಿದರು.
ಧ್ವಜಾರೋಹಣವನ್ನು ತುರುವೇಕೆರೆ ಪೊಲೀಸ್ ವೃತ್ತ ನಿರೀಕ್ಷಕರಾದ ಗೋಪಾಲ್ ಎನ್. ನಾಯಕ್ , ಹಾಗೂ ಪೊಲೀಸ್ ಉಪನಿರೀಕ್ಷಕರಾದ ಕೇಶವಮೂರ್ತಿ ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರುನಾಡ ವಿಜಯ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಹೆಚ್. ಎನ್. ದೀಪಕ್ ವಹಿಸಲಿದ್ದಾರೆ., ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕರಾದ ಮಸಾಲ ಜಯರಾಮ್ ನೆರವೇರಿಸಲಿದ್ದಾರೆ ಎಂದು ಅವರು ತಿಳಿಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ದಿನಾಂಕ 28.11.2022ನೇ ಸೋಮವಾರದಂದು ಉಚಿತ ಬೃಹತ್ ಆರೋಗ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ ನಮ್ಮ ತಾಲೂಕಿನ ಅತಿ ಕಿರಿಯ ವಯಸ್ಸಿನಲ್ಲಿಯೇ ತನ್ನ ಅಂಗಾಂಗಗಳನ್ನು ದಾನ ಮಾಡಿ ಇಂದಿನ ಯುವ ಪೀಳಿಗೆಗೆ ಸ್ಪೂರ್ತಿಯಾದ ದಿವಂಗತ ದರ್ಶನ್ ನರಿಗೆಹಳ್ಳಿ ಇವರ ತಂದೆ ತಾಯಿಗಳಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸುರೇಶ್ ತಿಳಿಸಿದರು.
ಉಚಿತ ಆರೋಗ್ಯ ತಪಾಸಣಾ ಮೇಳವನ್ನೂ ಹಮ್ಮಿಕೊಳ್ಳಲಾಗಿದ್ದು, ಇದರ ಅಧ್ಯಕ್ಷತೆಯನ್ನು ತಾಲೂಕಿನ ದಂಡಾಧಿಕಾರಿಗಳಾದ ವೈ.ಎಂ.ರೇಣು ಕುಮಾರ್ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ತುರುವೇಕೆರೆ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸುಪ್ರೀತಾ ಉದ್ಘಾಟಿಸಲಿದ್ದಾರೆ. ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಹರಿಪ್ರಸಾದ್ , ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಪದ್ಮನಾಭ ಉಪಸ್ಥಿತರಿರಲಿದ್ದಾರೆ ಎಂದು ಅವರು ತಿಳಿಸಿದರು.
ಈ ಸಭೆಯಲ್ಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾದ ಕೃಷ್ಣಮೂರ್ತಿ (ಕಿಟ್ಟಿ), ಕಾರ್ಯಾಧ್ಯಕ್ಷ ನಂದೀಶ್, ಗವಿ ರಂಗಪ್ಪ, ಗಿರೀಶ್, ಎಸ್ ಸಿ / ಎಸ್ ಟಿ ತಾಲೂಕು ಘಟಕದ ಅಧ್ಯಕ್ಷರಾದ ಬಿಗನಹಳ್ಳಿ ಪುಟ್ಟರಾಜು, ಅಲ್ಪಸಂಖ್ಯಾತರ ಘಟಕದ ಶಫಿ, ಮಹಿಳಾ ಘಟಕದ ಲಲಿತಾ ಹಾಗೂ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz