ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಎನ್ ಹೆಚ್ 4 ರ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಶ್ರೀ ಮುರುಗನ್ ಕ್ರೇನ್ ಸರ್ವಿಸ್ ಟೂರಿಸ್ಟ್ ನಲ್ಲಿ ನಡೆದ ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಕಾರ್ಯಕ್ರಮದಲ್ಲಿ ಮುರುಳಿ ಪಿ. ಅವರನ್ನು ಕರುನಾಡು ಸಾರಥಿಗಳ ಸೈನ್ಯ ಟ್ರೇಡ್ ಯೂನಿಯನ್ ರಾಜ್ಯಾಧ್ಯಕ್ಷರಾದ ಸುದೀಂದ್ರ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.
ಪದಾಧಿಕಾರಿಗಳ ಆಯ್ಕೆ ಬಗ್ಗೆ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಸುದೀಂದ್ರ ಅವರು, ಸಂಘದ ಚಟುವಟಿಕೆಯಲ್ಲಿ ಎಲ್ಲರು ಕೈ ಜೋಡಿಸಬೇಕು. ಸಂಕಷ್ಟದಲ್ಲಿರುವವರಿಗೆ ಸಹಕರಿಸಬೇಕು. ವಾಹನ ಚಾಲನೆ ಸಂದರ್ಭದಲ್ಲಿ ಅತ್ಯಂತ ಎಚ್ಚರಿಕೆ ವಹಿಸುವು ದರೊಂದಿಗೆ ಸೂಕ್ತ ದಾಖಲಾತಿಗಳನ್ನು ಚಾಲಕರು ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ನೂತನ ಅಧ್ಯಕ್ಷರಾದ ಮುರುಳಿ ಪಿ . ಹಾಗೂ ಪ್ರಧಾನ ಕಾರ್ಯದರ್ಶಿ ತಿಮ್ಮೇಶ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಮಾತನಾಡಿ, ಕಾರು ಚಾಲಕರಿಗೆ ಕರ್ನಾಟಕದ ಯಾವ ಮೂಲೆಯಲ್ಲಿ ಆದರೂ ಏನೇ ಸಮಸ್ಯೆ ಗಳು ಇದ್ದಲ್ಲಿ ತಕ್ಷಣವೇ ನಾವು ಅವರಿಗೆ ಸ್ಪಂದಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ನಗರಸಭೆ ಅಧ್ಯಕ್ಷರಾದ ಎಸ್. ಶಿವರಂಜನಿ ಯಾದವ್ ಅವರು ಚಾಲಕರಿಗೆ ಶುಭಾಶಯಗಳು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ತಿಮ್ಮೇಶ್ , ಗೌರವ ಅಧ್ಯಕ್ಷರಾದ ಕ್ರೇನ್ ಸರ್ವಿಸ್ ಮಾಲಿಕರಾದ ಮುರುಗನ್ ಸಿ., ಉಪಾಧ್ಯಕ್ಷರಾದ ಮಧುಸೂದನ್ ಟಿ., ಕಾರ್ಯ ಕಾರಿಣಿ ಸದಸ್ಯರಾದ ರವಿ ಎಸ್. ಹಾಗೂ ಇತರರು ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್ ., ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz