ಸಾಂಸ್ಕೃತಿಕ ನಗರಿ ಮೈಸೂರಿನ ಕೆ.ಆರ್. ನಗರ ಪಟ್ಟಣದ ಜನವಸತಿ ಪ್ರದೇಶಕ್ಕೆ ಚಿರತೆ ಪ್ರತ್ಯಕ್ಷವಾಗಿದ್ದು, ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮೂವರ ಮೇಲೆ ದಾಳಿ ನಡೆಸಿದ ಆಘಾತಕಾರಿ ಘಟನೆ ಶುಕ್ರವಾರ ನಡೆದಿದೆ.
ಕೆ.ಆರ್.ನಗರ ಪಟ್ಟಣದ ಕನಕಗಿರಿ ಲೇಔಟ್ಗೆ ಚಿರತೆ ನುಗ್ಗಿದ್ದು, ರಸ್ತೆಯಲ್ಲಿ ಹೋಗ್ತಿದ್ದ ಬೈಕ್, ಸೈಕಲ್ ಸವಾರನ ಮೇಲೂ ದಾಳಿ ಮಾಡಿದೆ. ಅರಣ್ಯ ಸಿಬ್ಬಂದಿ ಮೇಲೂ ಚಿರತೆ ಎರಗಿ ಗಾಯಗೊಳಿಸಿದೆ.
ಮೊನ್ನೆಯಷ್ಟೆ ಟಿ.ನರಸೀಪುರದಲ್ಲಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಹಿಡಿಯಲು ಅರಣ್ಯಾಧಿಕಾರಿ ಸೀಮಾ, ರಶ್ಮಿ ಟೀಂ ಹರಸಾಹಸ ಪಟ್ಟಿದ್ದು, ಮನೆಯಿಂದ ಹೊರ ಬರದಂತೆ ಜನರಿಗೆ ಮೈಕ್ ಮೂಲಕ ಸಂದೇಶ ನೀಡಿದ್ದಾರೆ.
ಶುಕ್ರವಾರ ಕೆಆರ್ ನಗರದಲ್ಲಿ ಭೀತಿ ಸೃಷ್ಟಿಸಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


