nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026
    Facebook Twitter Instagram
    ಟ್ರೆಂಡಿಂಗ್
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    • ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯ ಕ್ಷೇತ್ರದಲ್ಲಿ ಕಟಗಿಹಳ್ಳಿಮಠರ ಸೇವೆ ಅನನ್ಯ: ಪ್ರಭುಸ್ವಾಮಿಗಳು
    ಜಿಲ್ಲಾ ಸುದ್ದಿ April 15, 2023

    ಸಾಹಿತ್ಯ ಕ್ಷೇತ್ರದಲ್ಲಿ ಕಟಗಿಹಳ್ಳಿಮಠರ ಸೇವೆ ಅನನ್ಯ: ಪ್ರಭುಸ್ವಾಮಿಗಳು

    By adminApril 15, 2023No Comments2 Mins Read
    katagihalli

    ಬಾಗಲಕೋಟೆ: ಶಾಸನಗಳ ಗತವೈಭವ ತಿಳಿಯಲು ಮತ್ತು ನಾಡಿನ ಪರಂಪರೆಯನ್ನು ಅರಿಯಲು ಸಾಹಿತಿಗಳ ಸಂಶೋಧನೆ ಮತ್ತು ಗ್ರಂಥಗಳು ಅವಶ್ಯಕ. ಅವರ ಸಾಲಿನಲ್ಲಿ ಡಾ. ವಿಜಯಕುಮಾರ ಕಟಗಿಹಳ್ಳಿಮಠ ಒಬ್ಬರಾಗಿದ್ದು  ಅನೇಕ ಗ್ರಂಥಗಳ ಸಂಪಾದನೇ ಮತ್ತು ವಿಮರ್ಶೆಯ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ ಎಂದು ನಿಡಸೋಸಿ ಸಿದ್ಧಸಂಸ್ಥಾನ ಮಠದ ಪೂಜ್ಯ ಶ್ರೀ ಪ್ರಭುಸ್ವಾಮಿ ಚರಂತಿಮಠ ಹೇಳಿದರು.

    ನಗರದ ಬಿ.ವಿ.ವಿ  ಸಂಘದ ನೂತನ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ. ವಿಜಯಕುಮಾರ ಎಸ್. ಕಟಗಿಹಳ್ಳಿಮಠ ಅವರ ಗೌರವಾಭಿನಂದನೆ ಮತ್ತು ಅಂತರ್ಭುವಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಮರೇಗುದ್ದಿಯ ಅಡವಿಸಿದ್ಧೇಶ್ವರಮಠದ ಪೂಜ್ಯಶ್ರೀ ನಿರುಪಾಧೀಶ ಮಹಾಸ್ವಾಮಿಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಕುವೆಂಪು, ಬೇಂದ್ರೆ ಬಳಗದಂತೆ ಕಟಗಿಹಳ್ಳಿಮಠ ಅವರ ಶಿಷ್ಯಬಳಗವು ಅಪಾರವಾಗಿದೆ. ವಿದ್ಯಾರ್ಥಿಗಳು ದೇಶದ ಆಸ್ತಿಯಾಗಬೇಕಾದರೆ ಶಿಕ್ಷಣ ಮತ್ತು ಶಿಕ್ಷಕರ ಪಾತ್ರದೊಡ್ಡದು. ಕಟಗಿಹಳ್ಳಿಮಠ ಅವರು ಸುಸಂಸ್ಕೃತ ಕುಟುಂಬ ಸಾಹಿತ್ಯ, ಸಂಗೀತ, ಮತ್ತು ಕಲೆಯನ್ನು ನಿರಂತರ ಪ್ರೊತ್ಸಾಹಿಸುತ್ತಾ ಬಂದಿದ್ದಾರೆ ಎಂದರು.

    ಕಾರ್ಯಕ್ರಮದಲ್ಲಿ ಮಖ್ಯಾಥಿತಿಯಾದ ಜಾನಪದ ವಿದ್ವಾಂಸ ಶ್ರೀರಾಮ ಇಟ್ಟಣ್ಣವರು ಮಾತನಾಡಿ ಡಾ. ವಿ.ಎಸ್. ಕಟಗಿಹಳ್ಳಿಮಠ ಅವರು ಲೇಖಕರಾಗಿ, ಪ್ರಾಚಾರ್ಯರಾಗಿ ಮಾದರಿ ಆಡಳಿತ ಮಾಡಿದ್ದು ಬರವಣಿಗೆಯಲ್ಲಿ ತಮ್ಮದೇಯಾದ ಬದ್ದತೆಯನ್ನು ಹೊಂದಿದ್ದಾರೆ. ಸ್ಥಳೀಯ ವಿದ್ಯಮಾನಗಳನ್ನು ಗುರುತಿಸಿ ಹಲವಾರು ಗ್ರಂಥಗಳನ್ನು ಸಂಪಾದನೆ ಮಾಡಿದ್ದಾರೆ ಎಂದರು.

    ಕೇಂದ್ರೀಯ ವಿವಿ ಕುಲಸಚಿವರಾದ ಡಾ.ಬಸವರಾಜ ಡೋಣೂರ ಅವರು ಮಾತನಾಡಿ ಒಂದು ಸಂಸ್ಥೆ ಸಮಾಜದಲ್ಲಿ ಮಾದರಿ ಸಂಸ್ಥೆಯಾಗಬೇಕಾದರೆ ಅದರ ಹೊಣೆಗಾರನಿಗೆ ಮೇರು ವ್ಯಕ್ತಿತ್ವ ಮುಖ್ಯ ಅಂತಹ ಸಂಸ್ಕಾರಯುತ ವ್ಯಕ್ತಿತ್ವ ಪ್ರಾಚಾರ್ಯ ಡಾ.ವಿ.ಎಸ್. ಕಟಗಿಹಳ್ಳಿಮಠ ಅವರಲ್ಲಿದೆ. ವಯಸ್ಸು ಮನುಷ್ಯನನ್ನು ಪರಿಪಕ್ವನನ್ನಾಗಿಸುತ್ತದೆ ಅವರು ಸೃಜನಶೀಲ ಮತ್ತು ಸೌಜನ್ಯತೆಯಿಂದ ವೃತ್ತಿ, ಭಾಷೆ, ಸಾಹಿತ್ಯದಲ್ಲಿ ಅಪಾರ ಸಾಧನೆ ಮಾಡಿದ್ದು ಹೆಮ್ಮೆಯ ವಿಷಯ ಎಂದರು.

    ನಂತರ ನಡೆದ “ಡಾ.ವಿಜಯಕುಮಾರ ಎಸ್ ಕಟಗಿಹಳ್ಳಿಮಠ ಅವರ ಸಾಹಿತ್ಯಎಂಬ ವಿಚಾರಗೋಷ್ಠಿಯಲ್ಲಿ ಧಾರವಾಡದ ಡಾ. ಡಿ ಜಿ ಹಾಜವಗೋಳ “ಸಂಶೋಧನ ಬರಹಗಳು, ನರೆಗಲ್ಲಿನ ಡಾ. ಕಲ್ಲಯ್ಯಾ ಎಸ್. ಹಿರೇಮಠ “ವಿಮರ್ಶಾ ಬರಹಗಳು” ಹಾಗೂ ಬಾಗಲಕೋಟೆಯ ಡಾ ಬಸವರಾಜ ಕುಂಬಾರ “ಸಂಪಾದನೆ ಕೃತಿಗಳ” ವಿಷಯದ ಮೇಲೆ ಉಪನ್ಯಾಸ ನೀಡಿದರು.

    ಕಾರ್ಯಕ್ರಮದಲ್ಲಿ ಡಾ. ಎಸ್.ವಿ. ಮಠಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಲೋಕೋಪಯೋಗಿ ಇಲಾಖೆಯ ನಿವೃತ್ತ ಕಾರ್ಯದರ್ಶಿ ಜಿ.ಸಿ. ತಲ್ಲೂರ, ಕನ್ನಡ ಪ್ರಾದ್ಯಾಪಕ ಡಾ. ರಾಜಶೇಖರ ಹಳೆಮನಿ, ವಿಶ್ರಾಂತಿ ಕುಲಪತಿ ಡಾ. ಎಮ್.ಆರ್. ಚಂದಾವರಕರ, ಬಿ.ವಿ.ವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ್ ಎನ್.ಅಥಣಿ, ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷರು ಗುರುಬಸವ ಸೂಳಿಭಾವಿ, ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಗಳ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಪ್ರೊ. ವ್ಹಿ. ಆರ್. ಶಿರೋಳ ಗೋಪಾಲ ಮರೆಗುದ್ದಿ, ಡಾ. ಬಿ.ಕೆ. ಹಿರೇಮಠ, ಡಾ. ಬಾಳಾಸಾಹೇಬ ಲೋಕಾಪೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಅಂತರ್ಭುವಿ ಗ್ರಂಥ ಲೋಕಾರ್ಪಣೆ: ಸಾಹಿತ್ಯ, ಸಾಂಸ್ಕೃತಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಪ್ರಾ. ಡಾ. ವ್ಹಿ.ಎಸ್. ಕಟಗಿಹಳ್ಳಿಮಠ ಅವರು ಮಾಡಿದ ಸಾಧನೆಯ ಕುರಿತ ಅಂತರ್ಭುವಿ ಗ್ರಂಥವನ್ನು ಲೋಕೋಪಯೋಗಿ ಇಲಾಖೆಯ ನಿವೃತ್ತ ಕಾರ್ಯದರ್ಶಿ ಜಿ.ಸಿ. ತಲ್ಲೂರ ಲೋಕಾರ್ಪಣೆ ಮಾಡಿದರು. ಕನ್ನಡ ಪ್ರಾದ್ಯಾಪಕ ಡಾ. ರಾಜಶೇಖರ ಹಳೆಮನಿ ಗ್ರಂಥ ಪರಿಚಯ ಮಾಡಿದರು. ಪತ್ರಿಕೋದ್ಯಮ ವಿಭಾಗದಿಂದ ನಿರ್ಮಿಸಲಾದ ಡಾ. ವಿ.ಎಸ್. ಕಟಗಿಹಳ್ಳಮಠ ಸಾಧನೆ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಬೆಂಗಳೂರು: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯ ಖ್ಯಾತ ನಟ, ನಿರ್ಮಾಪಕ ಹಾಗೂ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಖ್ಯಾತಿಯ ದಿಲೀಪ್ ರಾಜ್…

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.