ಹಿಜಾಬ್ ವಿವಾದ ಭುಗಿಲೆದ್ದ ಸಂದರ್ಭದಲ್ಲಿ ಕಾಲೇಜು ಆವರಣದಲ್ಲಿ ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿ ವಿವಾದದ ಕೇಂದ್ರ ಬಿಂದುವಾಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಪೊಲೀಸರ ಕಣ್ತಪ್ಪಿಸಿ ವಿದೇಶಕ್ಕೆ ಪ್ರಯಾಣ ಮಾಡಿರುವ ಅಂಶ ಬೆಳಕಿಗೆ ಬಂದಿದೆ.
ಹಿಜಾಬ್ ವಿವಾದ ಆರಂಭವಾಗಿದ್ದ ವೇಳೆ ಮುಸ್ಕಾನ್ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ಸಂದರ್ಭದಲ್ಲಿ ಆಡಳಿತ ಮಂಡಳಿ ಪ್ರವೇಶ ನಿರಾಕರಿಸಿತ್ತು. ಇದರಿಂದ ಆಕ್ರೋಶಗೊಂಡಿದ್ದ ಈ ವಿದ್ಯಾರ್ಥಿನಿ ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದ್ದಳು.
ಈಗ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಮುಸ್ಕಾನ್ ಕುಟುಂಬ ಸೌದಿ ಅರೇಬಿಯಾ ಪ್ರವಾಸಕ್ಕೆ ತೆರಳಿದೆ ಎಂದು ಹೇಳಲಾಗಿದೆ. ಇದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.ಈ ರೀತಿ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್‌ಗೆ ಅಲ್‌ಖೈದಾ ಉಗ್ರ ಸಂಘಟನೆಯಿಂದ ಮೆಚ್ಚುಗೆ ಕೂಡ ಪಡೆದಿದ್ದಳು. ಈ ಬಗ್ಗೆ ತನಿಖೆ ನಡೆಸುವಂತೆಯು ಒತ್ತಾಯಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಖಾಕಿ ಪಡೆ ಮುಸ್ಕಾನ್ ಮನೆಗೆ ಬಂದು ಹೋಗುವವರ ಮೇಲೆ ತೀವ್ರ ನಿಗಾ ವಹಿಸಿತ್ತು.
ಆದರೆ, ಪೊಲೀಸರಿಗೆ ಯಾವುದೇ ಸುಳಿವು ನೀಡದೆ ಕಳೆದ ಏ. ೨೫ ರಂದು ಮುಸ್ಕಾನ್ ಕುಟುಂಬ ಸೌದಿಗೆ ತೆರಳಿದೆ ಎಂದು ಹೇಳಲಾಗಿದೆ.ಧಾರ್ಮಿಕ ಪ್ರವಾಸಕ್ಕಾಗಿ ಸೌದಿ ಪ್ರವಾಸ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂಬ ಒತ್ತಾಯಗಳು ಕೇಳಿ ಬಂದಿವೆ.ಅಲ್ಲಾ ಹು ಅಕ್ಬರ್ ಘೋಷಣೆ ಬಳಿಕ ಲಕ್ಷ ಲಕ್ಷ ಹಣ ಉಡುಗೊರೆಗಳು ಬಂದಿದ್ದವು. ಅಷ್ಟೇ ಅಲ್ಲ ಸ್ಮಾರ್ಟ್‌ಫೋನ್, ವಾಚ್ ಸೇರಿದಂತೆ ಬೆಲೆ ಬಾಳುವ ಉಡುಗೊರೆಗಳು ಹರಿದು ಬಂದಿದ್ದವು. ವಿದೇಶದಿಂದಲೂ ಆಕೆಗೆ ಹಣ ಬಂದಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಮಂಡ್ಯ ಜಿಲ್ಲಾ ಎಸ್ಪಿಗೆ ದೂರುಗಳು ಬಂದಿವೆ. ಯಾವುದೇ ಮಾಹಿತಿ ನೀಡದೆ ಮೆಕ್ಕಾ ಪ್ರವಾಸಕ್ಕೆ ತೆರಳಿರುವುದು ಮುಸ್ಕಾನ್ ಕುಟುಂಬದ ಮೇಲೆ ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy