ತುಮಕೂರು: ವಜ್ಜನಕುರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರಗಾನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಕುರುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.
ಮೋರಗಾನಹಳ್ಳಿ ಗ್ರಾಮದ ವಿಶ್ವಣ್ಣ ಎಂಬುವರಿಗೆ ಸೇರಿದ ಕರು. ಮನೆಯ ಪಕ್ಕದ ಕೊಟ್ಟಿಗೆಯಲ್ಲಿ ಕರುವನ್ನು ಕಟ್ಟಲಾಗಿತ್ತು. ಗುರುವಾರ ತಡರಾತ್ರಿ ದಾಳಿ ನಡೆಸಿರುವ ಚಿರತೆ ಕರುವನ್ನು ಎತ್ತೊಯ್ಯಲಾಗದೆ ಇದ್ದ ಜಾಗದಲ್ಲೆ ತಿಂದು ಹಾಕಿದೆ.
ಗ್ರಾಮದ ಮಧ್ಯ ಭಾಗದಲ್ಲಿನ ಕೊಟ್ಟಿಗೆಗೆ ಚಿರತೆ ದಾಳಿ ಮಾಡಿರುವುದರಿಂದ ಗ್ರಾಮದ ಜನ ಭಯಭೀತರಾಗಿದ್ದಾರೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳನ್ನು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy