ತಿಪಟೂರು: ತಾಲೂಕಿನ ವಿವೇಕಾನಂದ ಬಡಾವಣೆಯಲ್ಲಿ ಆಯೋಜನೆ ಮಾಡಲಾಗಿದ್ದ ಕಟ್ಟಡ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಟಿ ಶಾಂತಕುಮಾರ್ ಭಾಗವಹಿಸಿ ಕಾರ್ಮಿಕರ ಕುಂದುಕೊರತೆಗಳ ಬಗ್ಗೆ ಚರ್ಚಿಸಿ ದರು.
ಕಾರ್ಮಿಕರಿಗೆ ಲೇಬರ್ ಕಾರ್ಡ್ ಮಾಡಿಸುವಲ್ಲಿ ಬ್ರೋಕರ್ ಗಳ ಹಾವಳಿ ಹಾಗೂ ಸರ್ಕಾರದಿಂದ ಸಿಗುವ ಸವಲತ್ತು ವಿಳಂಬಗಳ ಬಗ್ಗೆ ಮಾತನಾಡಿದ ಶಾಂತ ಕುಮಾರ್, ಇನ್ನು ಮುಂದೆ ಈ ರೀತಿಯಾಗದಂತೆ ಸರ್ಕಾರಕ್ಕೆ ಗಮನ ತರುತ್ತೇವೆ. ಎಲ್ಲಾ ಕಾರ್ಮಿಕರು ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸೊಪ್ಪು ಗಣೇಶ್ ಬಸವರಾಜ್ ಅಧ್ಯಕ್ಷರಾದ ಹನುಮಂತಪ್ಪ ಹೊನ್ನಪ್ಪ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು
ವರದಿ: ಮಂಜು ಗುರುಗದಹಳ್ಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy