ಕುಡಿದ ಅಮಲಿನಲ್ಲಿ ಪತ್ನಿಯನ್ನೇ ಕಟ್ಟಿಗೆಯಿಂದ ಬಡಿದು ಪತಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಅವೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವರೇಹಳ್ಳಿ ಗ್ರಾಮದ ನಿವಾಸಿ ಬೋರಯ್ಯ ಮಂಗಳವಾರ ತಡರಾತ್ರಿ 4ನೇ ಪತ್ನಿ ಭದ್ರಮ್ಮನ ಹತ್ಯೆಗೈದಿದ್ದಾನೆ.
ಗ್ರಾಮದ ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬೋರಯ್ಯ ತಡರಾತ್ರಿ ಪತ್ನಿ ಜೊತೆ ಕುಡಿದು ಜಗಳವಾಡಿದ್ದು, ಕುಡಿದ ಮತ್ತಿನಲ್ಲಿ ಬಡಿಗೆಯಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.
ಈ ಮೊದಲು ಬೋರಯ್ಯ ತನ್ನ ಎರಡನೇ ಪತ್ನಿಯನ್ನು ಸಹ 2014ರಲ್ಲಿ ಇದೇ ರೀತಿ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಬಳಿಕ 6 ವರ್ಷಗಳ ಕಾಲ ಶಿಕ್ಷೆ ಅನುಭವಿಸಿ ಹೊರಬಂದು ಭದ್ರಮ್ಮಳನ್ನು ಮದುವೆಯಾಗಿದ್ದ. ಈ ಮಧ್ಯೆ ಎರಡನೇ ಪತ್ನಿ ಬದುಕಿರುವಾಗಲೇ ಇನ್ನೊಂದು ಮದುವೆ ಆಗಿದ್ದ. ಇದೀಗ ಪತ್ನಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ರಾಮನಗರ ಗ್ರಾಮಾಂತರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


