ಕಳೆದೊಂದು ತಿಂಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದ ಕೃಷ್ಣರಾಜಸಾಗರ, ಕೊನೆಗೂ ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ ಕೊಟ್ಟಿದೆ. ಕಳೆದ ಜೂನ್ ತಿಂಗಳ ಆರಂಭದಲ್ಲಿಯೇ ಮುಂಗಾರು ಮಳೆ ಆರಂಭವಾಗಬೇಕಿತ್ತು.
ಆದ್ರೆ, ಸರಿಯಾದ ಸಮಯಕ್ಕೆ ಮುಂಗಾರು ಆರಂಭವಾಗದೇ ಇದ್ದದ್ದು, ಬೇಸಿಗೆಗಾಲದಲ್ಲಿ ಈ ಬಾರಿ ಬೆಂಗಳೂರಿನ ಜನತೆ ಕುಡಿಯುವ ನೀರಿಗೂ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಕಾವೇರಿ, ಕೆಆರ್‌ಎಸ್ ಮೂಲಕ ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ ನೀಡಿದ್ದಾಳೆ.
ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯಕ್ಕೆ ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಈಗಾಗಲೇ ಜಲಾಶಯ ಮಟ್ಟ 124. 80 ಅಡಿಗಳ ಪೈಕಿ 100 ಅಡಿಗಳ ಗಡಿಯನ್ನು ಜಲಾಶಯ ದಾಟಿದೆ. ಇನ್ನು ಇದೇ ಪ್ರಮಾಣದಲ್ಲಿ ಮುಂದಿನ ನಾಲ್ಕೈದು ದಿನಗಳು ಮಳೆ ಸುರಿದ್ರೆ, ಜಲಾಶಯ ಭರ್ತಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮೂಲಗಳು ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


